ನಾನು ಬಿಜೆಪಿ ಲಸಿಕೆ ವಿರೋಧಿ, ಭಾರತ ಸರ್ಕಾರದ ವ್ಯಾಕ್ಸಿನ್ ತೆಗೆದುಕೊಳ್ಳುತ್ತೇನೆ: ಅಖಿಲೇಶ್ ಯಾದವ್

ಜೂನ್ 21 ರಿಂದ 18 ವರ್ಷ ಮೇಲ್ಪಟ್ಟವರಿಗೆ  ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆಯನ್ನು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸ್ವಾಗತಿಸಿದ್ದಾರೆ.
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್

ಲಕ್ನೋ: ಜೂನ್ 21 ರಿಂದ 18 ವರ್ಷ ಮೇಲ್ಪಟ್ಟವರಿಗೆ  ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆಯನ್ನು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸ್ವಾಗತಿಸಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಅಖಿಲೇಶ್ ಯಾದವ್ , ನಾನು ಬಿಜೆಪಿ ಲಸಿಕೆ ವಿರೋಧಿ, ಆದರೆ ಭಾರತ ಸರ್ಕಾರದ ಲಸಿಕೆ ತೆಗೆದುಕೊಳ್ಳುತ್ತೇನೆ, ನೀವು ಎಲ್ಲರು ಲಸಿಕೆ ತೆಗೆದುಕೊಳ್ಳಿ ಎಂದು ಕರೆ ನೀಡಿದ್ದಾರೆ. 

ಜನರ ಆಕ್ರೋಶಕ್ಕೆ ಮಣಿದು ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡಲು ಮುಂದಾಗಿದೆ. ಜನಸಾಮಾನ್ಯರ ಆಕ್ರೋಶದ ಹಿನ್ನೆಲೆಯಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಲಸಿಕೆಯ ಮೇಲೆ ನಿಯಂತ್ರಣ ಹೊಂದಲು ನಿರ್ಧರಿಸಿದೆ. ನಾವು ಬಿಜೆಪಿಯ ಲಸಿಕೆಗೆ ವಿರೋಧ ವ್ಯಕ್ತಪಡಿಸುತ್ತೇವೆ. ಆದರೆ ಭಾರತ ಸರ್ಕಾರದ ಲಸಿಕೆಯನ್ನು ಸ್ವಾಗತಿಸುತ್ತೇವೆ. ಹಾಗೆಯೇ ನಾವು ಕೂಡ ಲಸಿಕೆ ಪಡೆಯುತ್ತೇವೆ. ಅಲ್ಲದೆ ಜನರನ್ನು ಕೂಡ ಲಸಿಕೆ ತೆಗೆದುಕೊಳ್ಳುವಂತೆ ಪ್ರೋತ್ಸಾಹಿಸುವುದಾಗಿ ಅಖಿಲೇಶ್ ಬರೆದುಕೊಂಡಿದ್ದಾರೆ.

ಇನ್ನೂ ಅಖಿಲೇಶ್  ಯಾದವ್ ತಂದೆ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ಸೋಮವಾರ ಲಸಿಕೆ ಪಡೆದಿರುವ ಫೋಟೋವನ್ನು ಪಕ್ಷದ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com