ಉಚಿತ ಲಸಿಕೆ ಕುರಿತು ವಿಳಂಬದ ನಿರ್ಧಾರದಿಂದ ಸಾವಿರಾರು ಮಂದಿ ಸಾವು: ಪ್ರಧಾನಿ ಮೋದಿ ವಿರುದ್ಧ ದೀದಿ ವಾಗ್ದಾಳಿ

ಉಚಿತ ಲಸಿಕೆ ನೀಡಿಕೆ ಕುರಿತಂತೆ ಕೇಂದ್ರ ಸರ್ಕಾರ ಅನುಸರಿಸಿದ ವಿಳಂಬ ಧೋರಣೆಯಿಂದಾಗಿ ದೇಶದಲ್ಲಿ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಉಚಿತ ಲಸಿಕೆ ನೀಡಿಕೆ ಕುರಿತಂತೆ ಕೇಂದ್ರ ಸರ್ಕಾರ ಅನುಸರಿಸಿದ ವಿಳಂಬ ಧೋರಣೆಯಿಂದಾಗಿ ದೇಶದಲ್ಲಿ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂದು ಸಂಜೆ ಪ್ರಧಾನಿ ಮೋದಿ ಉಚಿತ ಲಸಿಕೆ ನೀಡಿಕೆ ಕುರಿತು ಘೋಷಣೆ ಮಾಡಿದ ಬೆನ್ನಲ್ಲೇ ಸರಣಿ ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ, '18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವ ಬಗ್ಗೆ ಈ ಹಿಂದೆಯೇ ನಿರ್ಧಾರ ಕೈಗೊಳ್ಳಬೇಕಿತ್ತು. ಪ್ರಧಾನಿ ನರೇಂದ್ರ ಮೋದಿಯವರ ವಿಳಂಬ ನಿರ್ಧಾರದಿಂದ  ಅನೇಕರು ಜೀವ ಕಳೆದುಕೊಳ್ಳುವಂತಾಯಿತು ಎಂದು ಟೀಕಿಸಿದ್ದಾರೆ.

'ರಾಜ್ಯಗಳ ಬೇಡಿಕೆ ಆಲಿಸಲು ಮೋದಿ ಅವರಿಗೆ ನಾಲ್ಕು ತಿಂಗಳುಗಳೇ ಬೇಕಾಯಿತು. ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವ ನಮ್ಮ ದೀರ್ಘಕಾಲದ ಬೇಡಿಕೆ ಬಗ್ಗೆ ಫೆಬ್ರುವರಿ 21ರಂದು ಮತ್ತು ಹಲವು ಬಾರಿ ಪ್ರಧಾನಿಗೆ ಪತ್ರ ಬರೆದಿದ್ದೆ. ಇದನ್ನು ಕೇಳಲು ಅವರಿಗೆ ನಾಲ್ಕು ತಿಂಗಳು ಬೇಕಾಯಿತು. ಅಂತಿಮವಾಗಿ,  ಬಹಳ ಒತ್ತಡದ ಬಂದ ಮೇಲೆ ಅವರು ನಮ್ಮ ಮಾತನ್ನು ಕೇಳಿದ್ದಾರೆ. ನಾವು ಹೇಳಿರುವುದನ್ನು ಅನುಷ್ಠಾನಗೊಳಿಸಲು ಮುಂದಾಗಿದ್ದಾರೆ' ಎಂದು ಮಮತಾ ಟ್ವೀಟ್ ಮಾಡಿದ್ದಾರೆ.

ಅಂತೆಯೇ 'ಫೆಬ್ರವರಿ '21 ರಲ್ಲಿ ಮತ್ತು ನಂತರ ಹಲವು ಬಾರಿ, ಎಲ್ಲರಿಗೂ ಉಚಿತವಾಗಿ ಲಸಿಕೆಗಳನ್ನು ನೀಡುವ ನಮ್ಮ ದೀರ್ಘಕಾಲದ ಬೇಡಿಕೆಯನ್ನು ತಿಳಿಸಿ ನಾನು ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದೇನೆ. ಆದರೆ ಈ ಕುರಿತು ನಿರ್ಧಾರ ಕೈಗೊಳ್ಳಲು ನಾಲ್ಕು ತಿಂಗಳು ಬೇಕಾಯಿತು. ಈ ಸಮಯದಲ್ಲಿ ಲಕ್ಷಾಂತರ  ಮಂದಿ ಜೀವ ಕಳೆದುಕೊಂಡರು. ಈ ಸಾಂಕ್ರಾಮಿಕದ ಆರಂಭದಿಂದಲೂ ದೇಶದ ಜನರ ಯೋಗಕ್ಷೇಮಕ್ಕೆ ಆದ್ಯತೆ ನೀಡಬೇಕಿತ್ತು. ದುರಾದೃಷ್ಟವಶಾತ್, ಮೋದಿಯವರ ವಿಳಂಬದ ನಿರ್ಧಾರವು ಅನೇಕರು ಜೀವ ಕಳೆದುಕೊಳ್ಳಲು ಕಾರಣವಾಯಿತು. ಈ ಬಾರಿ ಲಸಿಕಾ ಅಭಿಯಾನ ಪ್ರಚಾರ ಕೇಂದ್ರೀಕೃತವಾಗಿರದೆ  ಜನಪರವಾಗಿರಲಿ ಎಂದು ಆಶಿಸುತ್ತೇನೆ.

ಇಂದು (ಸೋಮವಾರ) ಸಂಜೆ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಘೋಷಣೆ ಮಾಡಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com