500 ರೈತರು ಮೃತಪಟ್ಟರು ಎದೆಗುಂದದೆ ರೈತರಿಂದ ನಿರಂತರ ಪ್ರತಿಭಟನೆ: ರಾಹುಲ್ ಗಾಂಧಿ

ಕೃಷಿ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸುಮಾರು 500 ಮಂದಿ ರೈತರು ಜೀವ ಕಳೆದುಕೊಂಡಿದ್ದರೂ ರೈತರು ಎದೆಗುಂದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಕೃಷಿ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸುಮಾರು 500 ಮಂದಿ ರೈತರು ಜೀವ ಕಳೆದುಕೊಂಡಿದ್ದರೂ ರೈತರು ಎದೆಗುಂದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ರೈತರ ಪ್ರತಿಭಟನೆ ಬೆಂಬಲಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ರೈತರ ಹೋರಾಟ ನ್ಯಾಯದ ಪರವಾಗಿದೆ. ಕೇಂದ್ರ ಜಾರಿಗೊಳಿಸಿದ ಎಪಿಎಂಸಿ ಸೇರಿದಂತೆ ವಿವಿಧ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್ ಮತ್ತು ಹರಿಯಾಣದ ರೈತರು ಕಳೆದ ಒಂದು ವರ್ಷದಿಂದ ದೆಹಲಿಯಲ್ಲಿ ಬೀಡು ಬಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೆ ಪ್ರತಿಭಟನೆ ಒಂದು ವರ್ಷ ಮುಗಿದಿದ್ದರೂ ಮುಂದುವರೆದಿದೆ.

ಕೊರೋನಾ, ಚಳಿಗಾಲ, ಮಳೆಗಾಲ, ಬೇಸಿಗೆ ಕಾಲ ಯಾವುದಕ್ಕೂ ರೈತರು ಎದೆಗುಂದಿಲ್ಲ. ಕೃಷಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ಬಿಜೆಪಿ ನೇತೃತ್ವದದ ಎನ್ ಡಿ ಎ ಸರ್ಕಾರದ ಅವಧಿ ಮುಗಿಯುವ ತನಕವೂ ನಿರಂತರ ಪ್ರತಿಭಟನೆ ಮುಂದುವರೆಸುವುದಾಗಿ ರೈತರು ಬಿಗಿ ಪಟ್ಟು ಹಾಕಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com