'ಸೋನಿಯಾ ಮತ್ತು ರಾಹುಲ್ ಗಾಂಧಿಗೆ ಭಾರತದ ಲಸಿಕೆ ಮೇಲೆ ನಂಬಿಕೆಯಿಲ್ಲ, ಹೀಗಾಗಿ ಲಸಿಕೆ ಹಾಕಿಸಿಕೊಂಡಿಲ್ಲ'
ಭಾರತದ ಲಸಿಕೆ ಮೇಲೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ನಂಬಿಕೆಯಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
Published: 09th June 2021 09:55 AM | Last Updated: 09th June 2021 12:49 PM | A+A A-

ರಾಹುಲ್ ಮತ್ತು ಸೋನಿಯಾ ಗಾಂಧಿ
ನವದೆಹಲಿ: ಭಾರತದ ಲಸಿಕೆ ಮೇಲೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ನಂಬಿಕೆಯಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
ಕೊರೋನಾ ವೈರಸ್ ಸಾಂಕ್ರಾಮಿಕ ರೋಗವನ್ನು ನಿರ್ಮೂಲನೆ ಮಾಡಲು ಭಾರತವು ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಕೋವಿಡ್-19 ಲಸಿಕೆ ಮೇಲೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ನಂಬಿಕೆಯಿಲ್ಲ, ಈ ಕಾರಣಕ್ಕಾಗಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಕೋವಿಡ್ ಲಸಿಕೆ ಪಡೆದಿಲ್ಲ ಎಂದು ಬಿಜೆಪಿ ಮುಖಂಡ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ನಾವು ಜನವರಿಯಲ್ಲಿ ವ್ಯಾಕ್ಸಿನೇಷನ್ ಆರಂಭಿಸಿದಾಗ, ಕಾಂಗ್ರೆಸ್ ನಾಯಕರು ಲಸಿಕೆ ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಈಗ ಅವರು ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ. ಆದರೆ ನನಗೆ ತಿಳಿದ ಪ್ರಕಾರ ಸೋನಿಯಾ ಹಾಗೂ ರಾಹುಲ್ ಲಸಿಕೆ ಹಾಕಿಸಿಕೊಂಡಿಲ್ಲ. ಅವರಿಗೆ ಭಾರತದ ಲಸಿಕೆ ಮೇಲೆ ನಂಬಿಕೆಯಿಲ್ಲ' ಎಂದು ಜೋಶಿ ಆರೋಪಿಸಿದ್ದಾರೆ.