ಪಶ್ಚಿಮ ಬಂಗಾಳ: ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಚೀನಾ ಪ್ರಜೆ ಬಿಎಸ್ಎಫ್ ವಶಕ್ಕೆ

ಪಶ್ಚಿಮ ಬಂಗಾಳದ ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯಲ್ಲಿ ಚೀನಾದ ಪ್ರಜೆಯನ್ನು ಗಡಿ ಭದ್ರತಾ ಪಡೆ(ಬಿಎಸ್‌ಎಫ್) ವಶಕ್ಕೆ ಪಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Published: 10th June 2021 04:23 PM  |   Last Updated: 10th June 2021 05:02 PM   |  A+A-


Arrested_images1

ಸಾಂದರ್ಭಿಕ ಚಿತ್ರ

Posted By : Vishwanath S
Source : PTI

ಕೋಲ್ಕತಾ: ಪಶ್ಚಿಮ ಬಂಗಾಳದ ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯಲ್ಲಿ ಚೀನಾದ ಪ್ರಜೆಯನ್ನು ಗಡಿ ಭದ್ರತಾ ಪಡೆ(ಬಿಎಸ್‌ಎಫ್) ವಶಕ್ಕೆ ಪಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಲ್ಡಾ ಜಿಲ್ಲೆಯ ಗಡಿ ಬಳಿ ಆತನನ್ನು ವಶಕ್ಕೆ ಪಡೆದಿದ್ದು ಬಿಎಸ್ಎಫ್, ಸ್ಥಳೀಯ ಪೊಲೀಸ್ ಮತ್ತು ಗುಪ್ತಚರ ಸಂಸ್ಥೆಗಳ ಅಧಿಕಾರಿಗಳು ಪ್ರಶ್ನಿಸುತ್ತಿದ್ದಾರೆ. ವಿಚಾರಣೆ ಬಳಿಕ ಹೆಚ್ಚಿನ ವಿವರಗಳನ್ನು ತಿಳಿಯಲಾಗುವುದು ಎಂದು ಅವರು ಹೇಳಿದರು.

ಆತನಿಂದ ಲ್ಯಾಪ್‌ಟಾಪ್, ಚೀನಾದ ಪಾಸ್‌ಪೋರ್ಟ್ ಮತ್ತು ಇತರ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp