ರಾಹುಲ್ ಗಾಂಧಿ
ದೇಶ
ಇಂಟರ್ನೆಟ್ ಇಲ್ಲದವರಿಗೂ ಜೀವಿಸುವ ಹಕ್ಕಿದೆ, ಲಸಿಕೆ ಪಡೆಯಲು ಸ್ಥಳದಲ್ಲೇ ನೋಂದಣಿ ವ್ಯವಸ್ಥೆ ಇರಲಿ: ರಾಹುಲ್ ಗಾಂಧಿ
ನೋಂದಣಿ ಮಾಡದಿದ್ದರೂ ಕೋವಿಡ್-19 ವ್ಯಾಕ್ಸಿನೇಷನ್ ಕೇಂದ್ರಕ್ಕೆ ಬರುವ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಆಗ್ರಹಿಸಿದ್ದಾರೆ.
ನವದೆಹಲಿ: ನೋಂದಣಿ ಮಾಡದಿದ್ದರೂ ಕೋವಿಡ್ -19 ವ್ಯಾಕ್ಸಿನೇಷನ್ ಕೇಂದ್ರಕ್ಕೆ ಬರುವ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಆಗ್ರಹಿಸಿದ್ದಾರೆ.
ಇಂಟರ್ನೆಟ್ ಬಳಸದವರಿಗೂ ಬದುಕುವ ಹಕ್ಕಿದೆ. ಹೀಗಾಗಿ ಲಸಿಕೆಗಾಗಿ ನೋಂದಣಿ ಮಾಡದಿದ್ದವರಿಗೂ ಲಸಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಡಿಜಿಟಲ್ ಬಳಕೆ ಅಥವಾ ಸ್ಮಾರ್ಟ್ ಫೋನ್ ಇಲ್ಲದ ಬಡವರಿಗೆ, ವಿಶೇಷವಾಗಿ ದೂರದ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿರುವವರಿಗಾಗಿ ಕಾಂಗ್ರೆಸ್ ಬ್ಯಾಟಿಂಗ್ ಮಾಡುತ್ತಿದೆ. ಕೋವಿಡ್ ಲಸಿಕೆ ಪಡೆಯಲು ಕೋವಿನ್ ನೋಂದಣಿ ಕಡ್ಡಾಯ ಬೇಡ ಎಂದು ವಿರೋಧ ಪಕ್ಷವೂ ಒತ್ತಾಯಿಸುತ್ತಿದೆ.
ಲಸಿಕೆಗಾಗಿ ಆನ್‌ಲೈನ್ ನೋಂದಣಿ ಸಾಕಾಗುವುದಿಲ್ಲ. ವ್ಯಾಕ್ಸಿನೇಷನ್ ಕೇಂದ್ರಕ್ಕೆ ನೇರವಾಗಿ ಬರುವ ಪ್ರತಿಯೊಬ್ಬ ವ್ಯಕ್ತಿಯು ಲಸಿಕೆ ನೀಡಬೇಕು ಎಂದು ಅವರು ಹಿಂದಿಯಲ್ಲಿ ಮಾಡಿದ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ