ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 91,702 ಕೇಸ್ ಪತ್ತೆ; 3,403 ಮಂದಿ ಸಾವು

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯ ಹಾದಿ ಮುಂದುವರೆದಿದ್ದು, ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯಾವಾದ 24 ಗಂಟೆಗಳ ಅವಧಿಯಲ್ಲಿ 91,702 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,403 ಮಂದಿ ಸಾವನ್ನಪ್ಪಿದ್ದಾರೆ. 

ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯ ಹಾದಿ ಮುಂದುವರೆದಿದ್ದು, ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯಾವಾದ 24 ಗಂಟೆಗಳ ಅವಧಿಯಲ್ಲಿ 91,702 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,403 ಮಂದಿ ಸಾವನ್ನಪ್ಪಿದ್ದಾರೆ. 

ಶುಕ್ರವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,92,74,823ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,63,079ಕ್ಕೆ ಏರಿಕೆಯಾಗಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,21,671 ಕ್ಕೆ ಇಳಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ , 1,34,580 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,77,90,073ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 20,44,131 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 37,42,42,384 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 24,60,85,649 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Related Stories

No stories found.

Advertisement

X
Kannada Prabha
www.kannadaprabha.com