ಪ್ರಧಾನಿ ಮೋದಿ ಭೇಟಿಯಾದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನರ್ ರಚನೆ ಸುದ್ದಿ ಹರಿದಾಡುತ್ತಿರುವ ನಡುವೆಯೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
Published: 11th June 2021 02:01 PM | Last Updated: 11th June 2021 02:01 PM | A+A A-

ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಪ್ರಧಾನಿ ಮೋದಿ
ನವದೆಹಲಿ: ಉತ್ತರ ಪ್ರದೇಶದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನರ್ ರಚನೆ ಸುದ್ದಿ ಹರಿದಾಡುತ್ತಿರುವ ನಡುವೆಯೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ್ ಅವರು ಬಿಜೆಪಿ ಸೇರ್ಪಡೆಗೊಂಡ ಬೆನ್ನಲ್ಲೇ ಯೋಗಿ ಆದಿತ್ಯನಾಥ್ 2 ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.
ಈ ಪ್ರವಾಸದಲ್ಲಿ ಕೇಂದ್ರ ಸಚಿವರು, ಪಕ್ಷದ ಹಿರಿಯ ಮುಖಂಡರನ್ನು ಯೋಗಿ ಆದಿತ್ಯನಾಥ್ ಅವರು ಭೇಟಿಯಾಗಲಿದ್ದು, ಇಂದು ಮಧ್ಯಾಹ್ನ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಉತ್ತರ ಪ್ರದೇಶದಲ್ಲಿ ಸಂಪುಟ ಪುನಾರಚನೆ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಲಖನೌದಲ್ಲಿ ಪಕ್ಷದ ಸರಣಿ ಸಭೆಗಳು ನಡೆಯುತ್ತಿದೆ, ಇದರ ನಡುವೆಯೇ ಆದಿತ್ಯನಾಥ್ ಅವರು ಪಕ್ಷದ ಹಿರಿಯ ನಾಯಕರ ಭೇಟಿ ಕುತೂಹಲವನ್ನು ಮೂಡಿಸಿದೆ.
ಪ್ರಧಾನಿ ಭೇಟಿಗೂ ಮುನ್ನ ಯೋಗಿ ಆದಿತ್ಯನಾಥ್ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.