ಹಿಮಾಚಲ ಪ್ರದೇಶ ಮಾಜಿ ಸಿಎಂ ವೀರಭದ್ರಸಿಂಗ್ ಗೆ 2 ತಿಂಗಳ ಅವಧಿಯಲ್ಲಿ 2ನೇ ಬಾರಿಗೆ ಕೋವಿಡ್ ಸೋಂಕು

ಹಿಮಾಚಲ ಪ್ರದೇಶ ಮಾಜಿ ಸಿಎಂ ವೀರಭದ್ರ ಸಿಂಗ್ ಅವರು ಮತ್ತೆ ಕೊರೋನಾ ಸೋಂಕಿಗೆ ತುತ್ತಾಗಿದ್ದು, ಆ ಮೂಲಕ ಅವರು ಕೇವಲ 2 ತಿಂಗಳ ಅವಧಿಯಲ್ಲಿ 2ನೇ ಬಾರಿಗೆ ಕೋವಿಡ್-19 ಸೋಂಕಿಗೆ ತುತ್ತಾಗಿದ್ದಾರೆ.
ವೀರಭದ್ರ ಸಿಂಗ್
ವೀರಭದ್ರ ಸಿಂಗ್

ಶಿಮ್ಲಾ: ಹಿಮಾಚಲ ಪ್ರದೇಶ ಮಾಜಿ ಸಿಎಂ ವೀರಭದ್ರ ಸಿಂಗ್ ಅವರು ಮತ್ತೆ ಕೊರೋನಾ ಸೋಂಕಿಗೆ ತುತ್ತಾಗಿದ್ದು, ಆ ಮೂಲಕ ಅವರು ಕೇವಲ 2 ತಿಂಗಳ ಅವಧಿಯಲ್ಲಿ 2ನೇ ಬಾರಿಗೆ ಕೋವಿಡ್-19 ಸೋಂಕಿಗೆ ತುತ್ತಾಗಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಆರು ಬಾರಿ ಹಿಮಾಚಲ ಪ್ರದೇಶದ ಸಿಎಂ ಆಗಿದ್ದ ವೀರಭದ್ರ ಸಿಂಗ್ ಅವರು ಈ ಹಿಂದೆ ಏಪ್ರಿಲ್ 12ರಂದು ಕೋವಿಡ್ ಸೋಂಕಿಗೆ ತುತ್ತಾಗಿ ಚಂಡೀಘಡದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಏಪ್ರಿಲ್ 30 ಗುಣಮುಖರಾಗಿದ್ದರು. ಮನೆಗೆ ಮರಳಿದ ಕೆಲವೇ ಗಂಟೆಗಳಲ್ಲಿ ಅವರಿಗೆ  ಹೃದಯ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಇದೀಗ ಮತ್ತೆ ಅವರಿಗೆ ಸೋಂಕು ಒಕ್ಕರಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಅವರನ್ನು ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು (ಐಜಿಎಂಸಿ) ಆಸ್ಪತ್ರೆಗೆ ದಾಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವಿಶೇಷ ಕಾರ್ಯದರ್ಶಿ (ಆರೋಗ್ಯ) ನಿಪುಣ್ ಜಿಂದಾಲ್  ತಿಳಿಸಿದ್ದಾರೆ.

ಒಂಬತ್ತು ಬಾರಿ ಶಾಸಕ ಮತ್ತು ಐದು ಬಾರಿ ಸಂಸದರಾಗಿದ್ದ ವೀರಭದ್ರ ಸಿಂಗ್ ಅವರು ಆರು ಅವಧಿಗೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 86 ವರ್ಷದ ವೀರಭದ್ರಸಿಂಗ್ ಅವರು ಪ್ರಸ್ತುತ ಸೋಲನ್ ಜಿಲ್ಲೆಯ ಅರ್ಕಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com