ಜಮ್ಮು-ಕಾಶ್ಮೀರದ ಸೊಪೋರ್'ನಲ್ಲಿ ಉಗ್ರರ ದಾಳಿ: 2 ಪೊಲೀಸರು ಹುತಾತ್ಮ, ಇಬ್ಬರು ನಾಗರೀಕರ ಸಾವು

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್'ನಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿ ಇಬ್ಬರು ನಾಗರೀಕರು ಸಾವನ್ನಪ್ಪಿದ್ದಾರೆಂದು ಶನಿವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್'ನಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿ ಇಬ್ಬರು ನಾಗರೀಕರು ಸಾವನ್ನಪ್ಪಿದ್ದಾರೆಂದು ಶನಿವಾರ ತಿಳಿದುಬಂದಿದೆ. 

ಉತ್ತರ ಕಾಶ್ಮೀರದ ಸೊಪೋರ್'ನ ಅರಂಪೋರಾ ಎಂಬ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಸ್ಥಳಕ್ಕೆ ಬಂದಿರುವ ಉಗ್ರರು ಏಕಾಏಕಿ ಗುಂತಿನ ದಾಳಿ ನಡೆಸಿದ್ದು, ಈ ವೇಳೆ ಸ್ಥಳದಲ್ಲಿದ್ದ ಇಬ್ಬರು ಪೊಲೀಸರು ಹಾಗೂ ಇಬ್ಬರು ನಾಗರೀಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಪೊಲೀಸರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ದಾಳಿಯ ಹಿಂದೆ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಕೈವಾಡ ಇರುವುದಾಗಿ ಕಾಶ್ಮೀರದ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ಅವರು ಹೇಳಿದ್ದಾರೆ. 

ಘಟನೆ ಬಳಿಕ ಸ್ಥಳಕ್ಕೆ ಭದ್ರತಾಪಡೆಗಳು ದೌಡಾಯಿಸಿದ್ದು, ಜಂಟಿ ಕಾರ್ಯಾಚರಣೆ ಆರಂಭಿಸಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com