ಬಿಜೆಪಿ ವಿರುದ್ಧ ವಿಪಕ್ಷಗಳ ಮಹಾಮೈತ್ರಿ ಅಗತ್ಯ: ಪವಾರ್- ಪ್ರಶಾಂತ್ ಕಿಶೋರ್ ಭೇಟಿಯ ನಂತರ ಎನ್‌ಸಿಪಿ ನಾಯಕನ ಮಾತು

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾದ ಒಂದು ದಿನದ ನಂತರ, ಪಕ್ಷದ ವಕ್ತಾರ 2024 ರ ಲೋಕಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿ ವಿರುದ್ಧ ರಾಜಕೀಯ ಪಕ್ಷಗಳ "ಮಹಾಮೈತ್ರಿ" ರಚಿಸುವ ಅವಶ್ಯಕತೆಯಿದೆ ಎಂದು ಹೇಳಿದರು.
ನವಾಬ್ ಮಲಿಕ್
ನವಾಬ್ ಮಲಿಕ್

ಮುಂಬೈ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾದ ಒಂದು ದಿನದ ನಂತರ, ಪಕ್ಷದ ವಕ್ತಾರ 2024 ರ ಲೋಕಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿ ವಿರುದ್ಧ ರಾಜಕೀಯ ಪಕ್ಷಗಳ "ಮಹಾಮೈತ್ರಿ" ರಚಿಸುವ ಅವಶ್ಯಕತೆಯಿದೆ ಎಂದು ಹೇಳಿದರು.

ಕಿಶೋರ್ ಅವರು ಮುಂಬೈನ ನಿವಾಸದಲ್ಲಿ ಶುಕ್ರವಾರ ಪವಾರ್ ಅವರನ್ನು ಭೇಟಿಯಾಗಿದ್ದರು. ಸುಮಾರು ಮೂರು ಗಂಟೆಗಳ ಕಾಲ ನಡೆದ ಈ ಸಭೆ ರಾಜಕೀಯ ವಲಯಗಳಲ್ಲಿ ಊಹಾಪೋಹಗಳಿಗೆ ಕಾರಣವಾಗಿದೆ. ಆದರೆ, ಸಭೆಯಲ್ಲಿ ಏನು ಚರ್ಚಿಸಲಾಗಿದೆ ಎನ್ನುವುದು ಬಹಿರಂಗವಾಗಿಲ್ಲ.

ಎನ್‌ಸಿಪಿ ಮುಖಂಡ ಮತ್ತು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್, "ಮುಂದಿನ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ವಿರುದ್ಧ ರಾಜಕೀಯ ಪಕ್ಷಗಳ ಮಹಾಮೈತ್ರಿ ರಚಿಸುವ ಅವಶ್ಯಕತೆಯಿದೆ. ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಎಲ್ಲ ಪಕ್ಷಗಳ ರಾಷ್ಟ್ರೀಯ ಮೈತ್ರಿ ಹೊಂದುವ ಅಗತ್ಯತೆಯ ಬಗ್ಗೆ ಮಾತನಾಡಿದ್ದರು. ಬಿಜೆಪಿಯನ್ನು ಎದುರಿಸಲು ಇಂತಹಾ ಸಮಾನ ಮನಸ್ಕರನ್ನು ಒಟ್ಟುಗೂಡಿಸಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ".

"ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಡೇಟಾ ಮತ್ತು ಅಂಕಿಅಂಶಗಳನ್ನು ಚೆನ್ನಾಗಿ ತಿಳಿದಿದ್ದಾರೆ. ಅವರ ಮೂರು ಗಂಟೆಗಳ ಸುದೀರ್ಘ ಚರ್ಚೆಯ ಸಮಯದಲ್ಲಿ, ಇದು ಖಂಡಿತವಾಗಿಯೂ ಪರಿಗಣನೆಗೆ ಬಂದಿದೆ" ಎಂದು ಅವರು ಹೇಳಿದರು.

ಕಳೆದ ತಿಂಗಳು ಶಿವಸೇನೆ ಮುಖಂಡ ಸಂಜಯ್ ರಾವತ್ ಅವರು ರಾಷ್ಟ್ರಮಟ್ಟದಲ್ಲಿ ವಿರೋಧ ಪಕ್ಷಗಳು ಮಹಾಮೈತ್ರಿ ಮಾಡಿಕೊಳ್ಳುವ ಅಗತ್ಯವನ್ನು ಒತ್ತಿಹೇಳಿದ್ದರು ಮತ್ತು ಶರದ್ ಪವಾರ್ ಅವರೊಂದಿಗೆ ಈ ಬಗ್ಗೆ ಚರ್ಚಿಸಿದ್ದೇನೆ ಎಂದು ಹೇಳಿದ್ದರು.

ಇದಕ್ಕೂ ಮುನ್ನ, ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಯನ್ನು ಪುನರ್ರಚಿಸುವ ಅವಶ್ಯಕತೆಯಿದೆ, ಇದರಿಂದ ಅದು ಬಿಜೆಪಿಗೆ ಬಲವಾದ ಪರ್ಯಾಯವಾಗಿ ಹೊರಹೊಮ್ಮುತ್ತದೆ ಮತ್ತು ಹೊಸ ಮೈತ್ರಿಕೂಟವನ್ನು ಪವಾರ್ ಅವರಂತಹ ಹಿರಿಯ ನಾಯಕ ಮುನ್ನಡೆಸಬೇಕು ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com