ಭವಿಷ್ಯದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಇಲ್ಲ; ಯುಪಿ ಚುನಾವಣೆಗೆ ಮುನ್ನ ಎಸ್‌ಬಿಎಸ್‌ಪಿ ನಾಯಕ ಓಂ ಪ್ರಕಾಶ್ ಹೇಳಿಕೆ

ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಸಮಾಜದ ಹಿಂದುಳಿದ ವರ್ಗಗಳಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ(ಎಸ್‌ಬಿಎಸ್‌ಪಿ) ಮುಖಂಡ ಓಂ ಪ್ರಕಾಶ್ ರಾಜ್‌ಭರ್ ಮತ್ತೆ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಳ್ಳುವುದನ್ನು ನಿರಾಕರಿಸಿದ್ದಾರೆ.
ಓಂ ಪ್ರಕಾಶ್ ರಾಜ್ಬರ್
ಓಂ ಪ್ರಕಾಶ್ ರಾಜ್ಬರ್

ಬಲಿಯಾ: ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಸಮಾಜದ ಹಿಂದುಳಿದ ವರ್ಗಗಳಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ(ಎಸ್‌ಬಿಎಸ್‌ಪಿ) ಮುಖಂಡ ಓಂ ಪ್ರಕಾಶ್ ರಾಜ್‌ಭರ್ ಮತ್ತೆ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಳ್ಳುವುದನ್ನು ನಿರಾಕರಿಸಿದ್ದಾರೆ.

2017ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಎಸ್‌ಬಿಎಸ್‌ಪಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು. ಆದರೆ ನಂತರ ಮೈತ್ರಿಯಿಂದ ಹೊರಬಂದಿತ್ತು.

ಮುಂದಿನ ವರ್ಷದ ಆರಂಭದಲ್ಲಿ ಉತ್ತರಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಇನ್ನು ಸುದ್ದಿ ಸಂಸ್ಧೆ ಪಿಟಿಐ ಜೊತೆ ಮಾತನಾಡಿದ ರಾಜ್‌ಭರ್, 'ಭವಿಷ್ಯದಲ್ಲಿ ಬಿಜೆಪಿಯೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಾವು ಬಿಜೆಪಿಯ ಯಾವುದೇ ನಾಯಕರೊಂದಿಗೆ ಸಂಪರ್ಕದಲ್ಲಿಲ್ಲ, ಇದುವರೆಗೂ ಯಾವುದೇ ಬಿಜೆಪಿ ಮುಖಂಡರು ನನ್ನನ್ನು ಸಂಪರ್ಕಿಸಿಲ್ಲ ಎಂದು ಹೇಳಿದರು.

ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಹಿಂದುಳಿದ ವರ್ಗಗಳ ದಲಿತರ ನಾಯಕರನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಹಿಂದುಳಿದ ವರ್ಗವನ್ನು ವಂಚಿಸಿದೆ. ಮುಂಬರುವ ಚುನಾವಣೆಗಳಲ್ಲಿ ಈ ಸರ್ಕಾರದ ವಿದಾಯ ನಿಶ್ಚಿತ ಎಂದು ಹೇಳಿದ ಅವರು ಬಿಜೆಪಿಯನ್ನು 'ಭಾರತೀಯ ಜೂಟ್ ಪಕ್ಷ' ಎಂದು ಕರೆದರು.

2017ರ ವಿಧಾನಸಭಾ ಚುನಾವಣೆಯಲ್ಲಿ ಎಸ್‌ಬಿಎಸ್‌ಪಿ ಎಂಟು ಸ್ಥಾನಗಳಲ್ಲಿ ಸ್ಪರ್ಧಿಸಿ ನಾಲ್ಕು ಸ್ಥಾನಗಳಲ್ಲಿ ಗೆದ್ದಿತ್ತು. ಯೋಗಿ ಸರ್ಕಾರ ರಾಜ್ಭರ್ ರನ್ನು ಸಂಪುಟ ಮಂತ್ರಿಯನ್ನಾಗಿ ಮಾಡಲಾಯಿತು. ತದನಂತರ ಅವರು ರಾಜೀನಾಮೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com