ಪಾರಂಪರಿಕ ತಾಣಗಳು, ಸ್ಮಾರಕಗಳು ಜೂನ್ 16ರಿಂದ ಸಾರ್ವಜನಿಕರಿಗೆ ಮುಕ್ತ: ಎಎಸ್‌ಐ

ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ (ಎಎಸ್‌ಐ) ಅಡಿಯಲ್ಲಿರುವ ಎಲ್ಲಾಸಂರಕ್ಷಿತ ಸ್ಮಾರಕಗಳು / ಪ್ರವಾಸಿ ತಾಣಗಳು ಮತ್ತು ವಸ್ತು ಸಂಗ್ರಹಾಲಯಗಳನ್ನು ಜೂನ್ 16 ರಿಂದ ತೆರೆಯಲಾಗುವುದು ಎಂದು ಸರ್ವೇಕ್ಷಣಾ ಸಂಸ್ಥೆ ಪ್ರಕಟಿಸಿದೆ.

Published: 14th June 2021 02:04 PM  |   Last Updated: 14th June 2021 02:28 PM   |  A+A-


ಹಂಪಿ ಕಲ್ಲಿನ ರಥ

Posted By : Raghavendra Adiga
Source : Online Desk

ನವದೆಹಲಿ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ (ಎಎಸ್‌ಐ) ಅಡಿಯಲ್ಲಿರುವ ಎಲ್ಲಾಸಂರಕ್ಷಿತ ಸ್ಮಾರಕಗಳು / ಪ್ರವಾಸಿ ತಾಣಗಳು ಮತ್ತು ವಸ್ತು ಸಂಗ್ರಹಾಲಯಗಳನ್ನು ಜೂನ್ 16 ರಿಂದ ತೆರೆಯಲಾಗುವುದು ಎಂದು ಸರ್ವೇಕ್ಷಣಾ ಸಂಸ್ಥೆ ಪ್ರಕಟಿಸಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ಕೊರೋನಾದ ಎರಡನೇ ಅಲೆ ಪ್ರಾರಂಭವಾದಾಗ ಎಲ್ಲಾ ಸ್ಮಾರಕಗಳನ್ನು ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧಿಸಲಾಗಿತ್ತು.

100 ವರ್ಷಕ್ಕಿಂತ ಹಳೆಯದಾದ ಸ್ಮಾರಕಗಳೂ ಸೇರಿದಂತೆ ಒಟ್ಟು 3,684 ಸ್ಮಾರಕಗಳು ಎಎಸ್‌ಐ ವ್ಯಾಪ್ತಿಯಲ್ಲಿದೆ.

ಉದಾಹರಣೆಗೆ ಉತ್ತರ ಪ್ರದೇಶದಲ್ಲಿ 741 ಸ್ಮಾರಕಗಳಿವೆ. ಅದರಲ್ಲಿ ವಿಶ್ವ ಪ್ರಸಿದ್ಧ ತಾಜ್ ಮಹಲ್ ಮತ್ತು ಆಗ್ರಾ ಕೋಟೆಗಳು ಸೇರಿದೆ. ಕರ್ನಾಟಕದ ಹಂಪಿ, ಬಾದಾಮಿ, ಪಟ್ಟದಕಲ್ಲುಗೋಳಗುಮ್ಮಟ ಸೇರಿ ಅನೇಕ ಐತಿಹಾಸಿಕ ಸ್ಮಾರಕಗಳು ಸಹ ಎಎಸ್‌ಐ ವ್ಯಾಪ್ತಿಗೆ ಬರುತ್ತದೆ.


Stay up to date on all the latest ರಾಷ್ಟ್ರೀಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp