ಇಸ್ರೇಲ್ ನೂತನ ಪ್ರಧಾನಿಯಾಗಿ ನಫ್ತಾಲಿ ಬೆನ್ನೆಟ್ಟ್ ಆಯ್ಕೆ; ಪ್ರಧಾನಿ ಮೋದಿ ಶುಭ ಹಾರೈಕೆ

ಇಸ್ರೇಲ್ ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ನಫ್ತಾಲಿ ಬೆನ್ನೆಟ್ಟ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಕೆ ಮಾಡಿದ್ದಾರೆ.

Published: 14th June 2021 01:16 PM  |   Last Updated: 14th June 2021 01:19 PM   |  A+A-


Prime Minister Narendra Modi. (Photo | PTI)

ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)

Posted By : Srinivasamurthy VN
Source : PTI

ನವದೆಹಲಿ: ಇಸ್ರೇಲ್ ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ನಫ್ತಾಲಿ ಬೆನ್ನೆಟ್ಟ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಕೆ ಮಾಡಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಭಾರತ ಮತ್ತು ಇಸ್ರೇಲ್ ಉಭಯ ದೇಶಗಳ ನಡುವಿನ ಸಂಬಂಧವನ್ನು ಗಾಢವಾಗಿಸಲು ನೂತನ ಪ್ರಧಾನಿ ನಫ್ತಾಲಿ ಬೆನ್ನೆಟ್ಟ್ ಅವರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ. ಮುಂದಿನ ವರ್ಷ ರಾಜತಾಂತ್ರಿಕ ಸಂಬಂಧಗಳ ಉನ್ನತೀಕರಣದ 30 ವರ್ಷಗಳನ್ನು ನಾವು  ಆಚರಿಸುತ್ತಿದ್ದಂತೆ, ನಿಮ್ಮನ್ನು ಭೇಟಿ ಮಾಡಲು ಮತ್ತು ನಮ್ಮ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಗಾಢವಾಗಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಅಂತೆಯೇ ಮಾಜಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಾರ್ಯವೈಖರಿಯನ್ನೂ ಶ್ಲಾಘಿಸಿದ ಪ್ರಧಾನಿ ಮೋದಿ ನೆತನ್ಯಾಹು ನಾಯಕತ್ವ ಮತ್ತು ಭಾರತ-ಇಸ್ರೇಲ್ ಕಾರ್ಯತಂತ್ರದ ಸಹಭಾಗಿತ್ವಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ಇಸ್ರೇಲ್ ರಾಜ್ಯದ ಪ್ರಧಾನ ಮಂತ್ರಿಯಾಗಿ ನಿಮ್ಮ ಯಶಸ್ವಿ ಅಧಿಕಾರಾವಧಿಯನ್ನು ನೀವು  ಪೂರ್ಣಗೊಳಿಸಿದ್ದೀರಿ. ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ ನಿಮ್ಮ ನಾಯಕತ್ವ ಮತ್ತು ವೈಯಕ್ತಿಕ ಗಮನಕ್ಕಾಗಿ ನನ್ನ ಆಳವಾದ ಕೃತಜ್ಞತೆಯನ್ನು ತಿಳಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ನಲ್ಲಿ ನೇತನ್ಯಹು ಅಧಿಕಾರ ಅಂತ್ಯ: ನಫ್ತಾಲಿ ಬೆನ್ನೆಟ್ ನೂತನ ಪ್ರಧಾನಿ; ಹೊಸ ಸರ್ಕಾರಕ್ಕೆ ಅರಬ್ ಪಕ್ಷ 'ರಾಮ್' ಬೆಂಬಲ!

ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೇತನ್ಯಾಹು ಅವರನ್ನು ಭಾನುವಾರ ಪದಚ್ಯುತಗೊಳಿಸಲಾಗಿದ್ದು, ನಫ್ತಾಲಿ ಬೆನೆಟ್‌ ಅವರು ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು. ನೇತನ್ಯಾಹು ಬೆಂಬಲಿಗರ ಗದ್ದಲದ ನಡುವಯೇ, ಅವರ ಪದಚ್ಯುತಿಗೆ 120 ಸದಸ್ಯ ಬಲದ ಇಸ್ರೇಲ್‌ ಸಂಸತ್‌ ಅನುಮೋದನೆ ನೀಡಿತು.   ಇದರೊಂದಿಗೆ ಕಳೆದ 12 ವರ್ಷಗಳಿಂದಲೂ ಪ್ರಧಾನಿಯಾಗಿದ್ದ ನೇತನ್ಯಾಹು ಅವರ ಅಧಿಕಾರ ಕೊನೆಗೊಂಡಂತಾಗಿದೆ.

ಮಾಜಿ ರಕ್ಷಣಾ ಸಚಿವರೂ ಆಗಿರುವ 49 ವರ್ಷದ ನಫ್ತಾಲಿ ಅವರು ಬಲಪಂಥೀಯ ಪಕ್ಷ ಯಾಮಿನಿ ಪಾರ್ಟಿಯ ಮುಖಂಡ. ಅವರು ಸೈದ್ಧಾಂತಿಕವಾಗಿ ವಿಭಿನ್ನ ನಿಲುವುಗಳನ್ನು ಹೊಂದಿರುವ ಎಡಪಂಥೀಯ, ಬಲಪಂಥೀಯ, ಅರಬ್‌ ಪಕ್ಷಗಳ ಮೈತ್ರಿಕೂಟದ ನಾಯಕರಾಗಿದ್ದಾರೆ. ನೂತನ ಸರ್ಕಾರದಲ್ಲಿ 9 ಜನ  ಮಹಿಳೆಯರು ಸೇರಿ 27 ಜನ ಸಚಿವರಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp