ರಾಮ ಮಂದಿರ ಭೂಮಿ ಖರೀದಿ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ನಡೆಸಲಿ: ಸುರ್ಜೆವಾಲಾ

 ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ ಭೂಮಿ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ನಡೆಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.
ರಣದೀಪ್ ಸುರ್ಜೆವಾಲಾ
ರಣದೀಪ್ ಸುರ್ಜೆವಾಲಾ

ನವದೆಹಲಿ: ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ ಭೂಮಿ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ನಡೆಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.

ವರ್ಚುವಲ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ಅವರು ಭೂಮಿಯನ್ನು ಖರೀದಿಸುವಲ್ಲಿನ ಅಕ್ರಮವನ್ನು "ದೊಡ್ಡ ಹಗರಣ" ಎಂದು ಕರೆದಿದ್ದು "ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ಟ್ರಸ್ಟ್ ಸ್ಥಾಪನೆಯಾಗಿದೆ, ನ್ಯಾಯಾಲಯವು ಅದನ್ನು ಅರಿತುಕೊಳ್ಳಬೇಕು ಸಮಸ್ಯೆ ಮತ್ತು ವಿಷಯವನ್ನು ತನಿಖೆ ಮಾಡಬೇಕು"

"ಟ್ರಸ್ಟ್ ಸಂಗ್ರಹಿಸಿದ ದೇಣಿಗೆ ಮತ್ತು ಖರ್ಚುಗಳಾಗಿ ಸ್ವೀಕರಿಸಿದ ಮೊತ್ತವನ್ನು ಸಹ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಲೆಕ್ಕಪರಿಶೋಧಿಸಬೇಕು" ಎಂದು ಅವರು ಹೇಳಿದರು.

ಆದರೆ, ಉದ್ದೇಶಿತ ರಾಮ ಮಂದಿರ ನಿರ್ಮಾಣ ಕಾರ್ಯಗಳನ್ನು ಸ್ಥಗಿತಗೊಳಿಸಲು ಕಾಂಗ್ರೆಸ್ ಬಯಸುವುದಿಲ್ಲ ಎಂದು ಅವರು ಹೇಳಿದರು.

ಸಮಾಜವಾದಿ ಪಕ್ಷದ ಮುಖಂಡ ತೇಜ್ ನಾರಾಯಣ್ ಪಾಂಡೆ ಅವರು ಭಾನುವಾರ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಭೂ ವ್ಯವಹಾರದಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕೋರಿದ ನಂತರ ವಿವಾದ ಭುಗಿಲೆದ್ದಿತು.

ಭಾನುವಾರ ಪತ್ರಿಕಾಗೋಷ್ಠಿ ನಡೆಸಿ ಪಾಂಡೆ, "ಈ ಭೂಮಿಯನ್ನು ಈ ಹಿಂದೆ 2 ಕೋಟಿ ರೂ. ಗೆ ರವಿ ಮೋಹನ್ ತಿವಾರಿ ಮತ್ತು ಸುಲ್ತಾನ್ ಅನ್ಸಾರಿ ಖರೀದಿಸಿದ್ದರು. ಟ್ರಸ್ಟ್ ಮಾರ್ಚ್ 18 ರಂದು 18.5 ಕೋಟಿ ರೂ. ಗೆ ಭೂಮಿಯನ್ನು ಖರೀದಿಸಿತು" ಎಂದು ಹೇಳಿದರು.

ಆರ್‌ಟಿಜಿಎಸ್ ಪಾವತಿ ವಿಧಾನದ ಮೂಲಕ ರವಿ ಮೋಹನ್ ತಿವಾರಿ ಮತ್ತು ಸುಲ್ತಾನ್ ಅನ್ಸಾರಿ ಅವರ ಬ್ಯಾಂಕ್ ಖಾತೆಗೆ 17 ಕೋಟಿ ರೂ. ಗಳನ್ನು ಕಳುಹಿಸಲಾಗಿದೆ ಮತ್ತು ಆರ್‌ಟಿಜಿಎಸ್ ಹಣ ವರ್ಗಾವಣೆಯ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು  ಇನ್ನು ಆಮ್ ಆದ್ಮಿ ಪಕ್ಷದ ಮುಖಂಡ ಸಂಜಯ್ ಸಿಂಗ್ ಕೂಡ ಇದೇ ರೀತಿಯ ಆರೋಪಗಳನ್ನು ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com