ಕೋವಿಡ್-19 ಅನ್ ಲಾಕ್: ಪ್ರವಾಸಿಗರ ಭೇಟಿಗೆ ತಾಜ್ ಮಹಲ್ ಮುಕ್ತ, ಒಮ್ಮೆಗೆ 650 ಮಂದಿಗೆ ಮಾತ್ರ ಅವಕಾಶ

ಕೋವಿಡ್-19 ಲಾಕ್ ಡೌನ್ ಬಳಿಕ ಮೊದಲ ಬಾರಿಗೆ ವಿಶ್ವ ವಿಖ್ಯಾತ ತಾಜ್ ಮಹಲ್ ಪ್ರವೇಶಕ್ಕೆ ಪ್ರವಾಸಿಗರಿಗೆ ಅನುಮತಿ ನೀಡಲಾಗಿದ್ದು, ಆದರೆ ಷರತ್ತು ಅನ್ವಯಿಸಲಾಗಿದೆ.

Published: 16th June 2021 11:09 AM  |   Last Updated: 16th June 2021 12:57 PM   |  A+A-


Taj Mahal

ತಾಜ್ ಮಹಲ್

Posted By : Srinivasamurthy VN
Source : ANI

ನವದೆಹಲಿ: ಕೋವಿಡ್-19 ಲಾಕ್ ಡೌನ್ ಬಳಿಕ ಮೊದಲ ಬಾರಿಗೆ ವಿಶ್ವ ವಿಖ್ಯಾತ ತಾಜ್ ಮಹಲ್ ಪ್ರವೇಶಕ್ಕೆ ಪ್ರವಾಸಿಗರಿಗೆ ಅನುಮತಿ ನೀಡಲಾಗಿದ್ದು, ಆದರೆ ಷರತ್ತು ಅನ್ವಯಿಸಲಾಗಿದೆ.

ಇದನ್ನೂ ಓದಿ: ಹಜ್ 2021: ಎಲ್ಲಾ ಅರ್ಜಿಗಳನ್ನು ರದ್ದುಗೊಳಿಸಿದ ಭಾರತ ಹಜ್ ಸಮಿತಿ

ಹೌದು.. ಕೊರೋನಾ ಕಾರಣದಿಂದಾಗಿ ದೇಶದಲ್ಲಿ ಬಹುತೇಕ ಪ್ರವಾಸಿ ತಾಣಗಳು ಮುಚ್ಚಲ್ಪಟ್ಟಿದ್ದವು. ಸದ್ಯ ಕೋವಿಡ್​ ಸೋಂಕು ಪ್ರಸರಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೆಲವು ಪ್ರೇಕ್ಷಣೀಯ ಸ್ಥಳಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಆಗ್ರಾದಲ್ಲಿರುವ ಪ್ರೇಮ ಸೌಧ ತಾಜ್​ಮಹಲ್  ಸೇರಿದಂತೆ, ಕೇಂದ್ರ ಸರ್ಕಾರದಿಂದ ಸಂರಕ್ಷಿಸಲ್ಪಡುವ ಎಲ್ಲಾ ಸ್ಮಾರಕಗಳನ್ನು ಇಂದಿನಿಂದ (ಜೂ.16) ಮತ್ತೆ ತೆರೆಯಲಾಗುತ್ತಿದ್ದು, ಪ್ರವಾಸಿಗರು ಕಣ್ತುಂಬಿಕೊಳ್ಳಬಹುದಾಗಿದೆ. ಸುಮಾರು 2 ತಿಂಗಳ ಬಳಿಕ ಪ್ರವಾಸಿಗರಿಗೆ ತಾಜ್​ಮಹಲ್​ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ.

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾದ ತಾಜ್​ಮಹಲ್​ನ್ನು ಕೊರೋನಾ ಕಾರಣದಿಂದಾಗಿ ಎರಡನೇ ಬಾರಿಗೆ ಏಪ್ರಿಲ್​ 4ರಿಂದ ಮುಚ್ಚಲಾಗಿತ್ತು. ಕಳೆದ ವರ್ಷ ಕೂಡ ಕೋವಿಡ್​ ಹೆಚ್ಚಾಗಿದ್ದರಿಂದ ತಾಜ್​ಮಹಲ್​​ಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ತಾಜ್​ ಮಹಲ್​ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತಿದೆ ಎಂದು ಹೇಳಿದೆ.

ಷರತ್ತು ಅನ್ವಯ
ಇನ್ನು ತಾಜ್ ಮಹಲ್ ವೀಕ್ಷಣೆಗೆ ಕೆಲ ಷರತ್ತುಗಳನ್ನು ವಿಧಿಸಲಾಗಿದ್ದು, ಒಮ್ಮೆಗೆ ಕೇವಲ 650 ಮಂದಿ ಪ್ರವಾಸಿಗರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಆದರೆ ಸ್ಮಾರಕದ ಯಾವುದೇ ಭಾಗವನ್ನು ಮುಟ್ಟಲು ಪ್ರವಾಸಿಗರಿಗೆ ಅವಕಾಶ ನೀಡುವುದಿಲ್ಲ. ಭೇಟಿ ನೀಡುವವರು ಕಡ್ಡಾಯವಾಗಿ  ಮಾಸ್ಕ್​​ ಧರಿಸಿರಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ತಾಜ್​​ಮಹಲ್​​ಗೆ ಭೇಟಿ ನೀಡುವ ಪ್ರವಾಸಿಗರು ಸ್ಪಂಜಿನಂತಹ ಕಾರ್ಪೆಟ್​ ಮೇಲೆ ಮಾತ್ರ ನಡೆಯಬೇಕು. ಅಲ್ಲಿ ಸ್ಯಾನಿಟೈಜರ್ ಸಿಂಪಡಿಸಲಾಗಿದ್ದು, ಅವರ ಶೂ, ಚಪ್ಪಲಿಗಳು ಸ್ಯಾನಿಟೈಜ್ ಆಗುತ್ತವೆ ಎಂದು  ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೊಂಚನೆಮ್ಮದಿ: ಸ್ಥಳೀಯ ಅಂಗಡಿ ಮಾರಾಟಗಾರರು
ಇನ್ನು ಕಳೆದ 2 ತಿಂಗಳುಗಳಿಂದ ಅಂಗಡಿ ತೆರೆಯಲಾಗದೇ ಜೀವನ ನಿರ್ವಹಣೆಗೆ ಸಂಕಷ್ಟ ಎದುರಿಸಿದ್ದೆವು. ಈಗ ತಾಜ್ ಮಹಲ್ ಅನ್ನು ಪ್ರವಾಸಿಗರಿಗೆ ತೆರೆಯಲಾಗಿದ್ದು, ನಾವೂ ಕೂಡ ಅಂಗಡಿಗಳನ್ನು ತೆರೆಯುತ್ತಿದ್ದೇವೆ. ಇದರಿಂದ ನಮ್ಮ ಸಂಕಷ್ಟ ಕೊಂಚ ನೀಗುತ್ತದೆ ಎಂದು ಭಾವಿಸಿದ್ದೇವೆ ಎಂದು ಹೇಳಿದ್ದಾರೆ.

ಕೊರೋನಾ ಎರಡನೇ ಅಲೆ ಕಾಣಿಸಿಕೊಂಡ ಬಳಿಕ ಪ್ರೇಕ್ಷಣೀಯ ಸ್ಥಳಗಳಾದ ಕೆಂಪುಕೋಟೆ, ತಾಜ್​ಮಹಲ್, ಅಜಂತಾ ಗುಹೆ ಸೇರಿದಂತೆ ಎಲ್ಲಾ ಕೇಂದ್ರೀಕೃತ ಸ್ಮಾರಕಗಳು ಹಾಗೂ ವಸ್ತು ಸಂಗ್ರಹಾಲಯಗಳನ್ನು ಏಪ್ರಿಲ್​ 15ರಿಂದ ಮುಚ್ಚಲು ಸರ್ಕಾರ ಆದೇಶಿಸಿತ್ತು.
 


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp