ದೆಹಲಿ ದಂಗೆ ಪ್ರಕರಣದಲ್ಲಿ 3 ವಿದ್ಯಾರ್ಥಿಗಳಿಗೆ ಜಾಮೀನು: ಹೈಕೋರ್ಟ್ ಆದೇಶ ವಿರುದ್ಧ 'ಸುಪ್ರೀಂ' ಮೊರೆ ಹೋದ ದೆಹಲಿ ಪೊಲೀಸ್

ಈಶಾನ್ಯ ದೆಹಲಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿ ಕಾರ್ಯಕರ್ತರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಪೊಲೀಸರು ಬುಧವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ದೆಹಲಿ ಹೈಕೋರ್ಟ್
ದೆಹಲಿ ಹೈಕೋರ್ಟ್

ನವದೆಹಲಿ: ಈಶಾನ್ಯ ದೆಹಲಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿ ಕಾರ್ಯಕರ್ತರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಪೊಲೀಸರು ಬುಧವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ದೆಹಲಿ ಹೈಕೋರ್ಟ್ ನಿನ್ನೆ ಇಬ್ಬರು ಜೆಎನ್‌ಯು ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಂಗನಾ ಕಲಿತಾ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿನಿ ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ಪ್ರತ್ಯೇಕ ತೀರ್ಪುಗಳಲ್ಲಿ ಜಾಮೀನು ನೀಡಿತ್ತು.

ಭಿನ್ನಮತೀಯರನ್ನು ಹತ್ತಿಕ್ಕುವ ಭರದಲ್ಲಿ ಪ್ರತಿಭಟನೆಯ ಹಕ್ಕು ಮತ್ತು ಭಯೋತ್ಪಾದಕ ಚಟುವಟಿಕೆಯ ನಡುವಿನ ರೇಖೆಯನ್ನು ರಾಜ್ಯವು ಮೊಟಕುಗೊಳಿಸಿದೆ ಮತ್ತು ಅಂತಹ ವೇಳೆ ಮನೋಧರ್ಮವು ಕುಸಿಯುತ್ತದೆ, ಇದು ಪ್ರಜಾಪ್ರಭುತ್ವಕ್ಕೆ ಅತ್ಯಂತ ದುಃಖದ ದಿನ ಎಂದು ದೆಹಲಿ ಪೊಲೀಸರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com