ಭಾರತದಲ್ಲಿ ಕೊರೋನಾ ಅಬ್ಬರ ಇಳಿಕೆ: ದೇಶದಲ್ಲಿಂದು 62,224 ಹೊಸ ಕೇಸ್ ಪತ್ತೆ, 2542 ಮಂದಿ ಸಾವು

ಭಾರತದಲ್ಲಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 62,224 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 2542 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 62,224 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 2542 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಬುಧವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,96,33,105ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,79,573ಕ್ಕೆ ಏರಿಕೆಯಾಗಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ನಡುವಲ್ಲೇ ಸಕ್ರಿಯ ಪ್ರಕರಣಗಳ ಸಂಖ್ಯೆ 8,65,432ಕ್ಕೆ ಇಳಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,07,628 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,83,88,100ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 19,30,987 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 38,33,06,971 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 26,19,72,014 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com