ಕೋವಿಡ್ ಲಸಿಕೆ ಪಡೆಯುವುದರಿಂದ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಶೇ.75-80 ರಷ್ಟು ಕಡಿಮೆ: ಕೇಂದ್ರ ಸರ್ಕಾರ

ಕೋವಿಡ್ ವ್ಯಾಕ್ಸಿನೇಷನ್ ನಂತರ ಸೋಂಕು ತಗುಲಿದರೂ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಗಳು ಶೇಕಡಾ 75-80ರಷ್ಟು ಕಡಿಮೆಯಾಗಿರುತ್ತದೆ ಎಂದು ಅಧ್ಯಯನಗಳು ತೋರಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಹೇಳಿದೆ.
ಲಸಿಕೆ ಪಡೆಯುತ್ತಿರುವ ಮಹಿಳೆ ಚಿತ್ರ
ಲಸಿಕೆ ಪಡೆಯುತ್ತಿರುವ ಮಹಿಳೆ ಚಿತ್ರ

ನವದೆಹಲಿ: ಕೋವಿಡ್ ವ್ಯಾಕ್ಸಿನೇಷನ್ ನಂತರ ಸೋಂಕು ತಗುಲಿದರೂ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಗಳು ಶೇಕಡಾ 75-80ರಷ್ಟು ಕಡಿಮೆಯಾಗಿರುತ್ತದೆ ಎಂದು ಅಧ್ಯಯನಗಳು ತೋರಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಹೇಳಿದೆ.

ಕೋವಿಡ್ ಲಸಿಕೆ ಪಡೆಯದವರಿಗೆ ಹೋಲಿಸಿದರೆ, ಲಸಿಕೆ ಹಾಕಿಸಿಕೊಂಡ ವ್ಯಕ್ತಿಗಳಲ್ಲಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಗಳು ಶೇಕಡಾ 75-80 ರಷ್ಟು ಕಡಿಮೆಯಿರುತ್ತದೆ ಎಂದು ಅಧ್ಯಯನಗಳು ತೋರಿಸಿವೆ.

ಲಸಿಕೆ ಹಾಕಿದ ವ್ಯಕ್ತಿಗಳಲ್ಲಿ  ಶೇಕಡಾ 8 ರಷ್ಟು ಆಮ್ಲಜನಕ ಬೆಂಬಲದ ಅಗತ್ಯತೆ ಬರಬಹುದು ಮತ್ತು ಐಸಿಯುಗೆ ದಾಖಲಾಗುವ ಅಪಾಯ ಕೇವಲ ಶೇ. 6 ರಷ್ಟಿದೆ ಎಂದು ನೀತಿ ಆಯೋಗದ ಸದಸ್ಯ(ಆರೋಗ್ಯ) ಡಾ. ವಿ. ಕೆ.ಪೌಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ಮೇ 7 ರಂದು ಗರಿಷ್ಠ ಪ್ರಕರಣಗಳು ವರದಿಯಾದಾಗಿನಿಂದ  ದೈನಂದಿನ ಹೊಸ ಪ್ರಕರಣಗಳಲ್ಲಿ ಬಹುತೇಕ ಶೇಕಡಾ 85 ರಷ್ಟು ಕುಸಿತ ಕಂಡುಬಂದಿದೆ. ಮೇ 10 ರಂದು ಗರಿಷ್ಠ ವರದಿ ನಂತರ ಒಟ್ಟು ಸಕ್ರಿಯ ಕೋವಿಡ್-19 ಪ್ರಕರಣಗಳಲ್ಲಿ ಶೇಕಡಾ 78.6 ರಷ್ಟು ಕುಸಿತ ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸಾಪ್ತಾಹಿಕ ಪ್ರಕರಣದ ಪಾಸಿಟಿವಿಟಿ ದರದಲ್ಲಿ ಶೇಕಡಾ 81 ರಷ್ಟು ತೀವ್ರ ಕುಸಿತ ಕಂಡುಬಂದಿದೆ.ಇದು ಏಪ್ರಿಲ್ 30- ಮೇ 6 ನಡುವೆ ಶೇ. 21.6 ರಷ್ಟಿತ್ತು ಎಂದು ಸರ್ಕಾರ ತಿಳಿಸಿದೆ.  513 ಜಿಲ್ಲೆಗಳಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ.5ಕ್ಕಿಂತಲೂ ಕಡಿಮೆಯಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com