ಧನ್ಕರ್ ಅವರನ್ನು ರಾಜ್ಯಪಾಲ ಹುದ್ದೆಯಿಂದ ವಾಪಸ್ ಕರೆಸಿಕೊಳ್ಳಲು ಕೇಂದ್ರಕ್ಕೆ 3 ಬಾರಿ ಪತ್ರ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಕರ್ ಅವರ ದೆಹಲಿ ಭೇಟಿಯನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಟೀಕಿಸಿದ್ದು ಮಕ್ಕಳನ್ನು ಸಮಾಧಾನ ಮಾಡಿ ಸುಮ್ಮನಿರಸಬಹುದು ಆದರೆ ವೃದ್ಧರನ್ನಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಸಿಎಂ ಮಮತಾ ಬ್ಯಾನರ್ಜಿ-ರಾಜ್ಯಪಾಲ ಧನ್ಕರ್
ಸಿಎಂ ಮಮತಾ ಬ್ಯಾನರ್ಜಿ-ರಾಜ್ಯಪಾಲ ಧನ್ಕರ್

ಕೋಲ್ಕತ್ತ: ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಕರ್ ಅವರ ದೆಹಲಿ ಭೇಟಿಯನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಟೀಕಿಸಿದ್ದು ಮಕ್ಕಳನ್ನು ಸಮಾಧಾನ ಮಾಡಿ ಸುಮ್ಮನಿರಸಬಹುದು ಆದರೆ ವೃದ್ಧರನ್ನಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ರಾಜ್ಯಪಾಲರ ಹುದ್ದೆಯಿಂದ ಧನ್ಕರ್ ಅವರನ್ನು ಹಿಂಪಡೆಯಬೇಕೆಂದು ಮೂರು ಬಾರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಮಮತಾ ಬ್ಯಾನರ್ಜಿ ಮಾಹಿತಿ ನೀಡಿದ್ದಾರೆ.

ರಾಜ್ಯಪಾಲರನ್ನು "ಕೇಂದ್ರದ ವ್ಯಕ್ತಿ" ಎಂದು ಹೇಳಿರುವ ಮಮತಾ ಬ್ಯಾನರ್ಜಿ, ಧನ್ಕರ್ ಅವರು ರಾಷ್ಟ್ರಪತಿಗಳು ಹಾಗೂ ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದರ ಬಗ್ಗೆ ಪ್ರತಿಕ್ರೆಯೆ ನೀಡಲು ನಿರಾಕರಿಸಿದ್ದಾರೆ.

ನಾನೇನು ಹೇಳಲಿ? ಈ ಪ್ರಕರಣದಲ್ಲಿ ಮಾತು ಬೆಳ್ಳಿ, ಮೌನ ಬಂಗಾರ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ರಾಜ್ಯಪಾಲರ ಬದಲಾವಣೆ ಕುರಿತ ವದಂತಿಗಳ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿರುವ ಮಮತಾ ಬ್ಯಾನರ್ಜಿ ಈ ರೀತಿಯ ಬೆಳವಣಿಗೆಗಳ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯಪಾಲರನ್ನು ನೇಮಕ ಮಾಡಬೇಕಾದಲ್ಲಿ ರಾಜ್ಯ ಸರ್ಕಾರದ ಜೊತೆ ಸಮಾಲೋಚನೆ ನಡೆಸಲಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಅದು ಆಗಿಲ್ಲ. ರಾಜ್ಯಪಾಲರ ಹುದ್ದೆಯಿಂದ ಧನ್ಕರ್ ಅವರನ್ನು ಹಿಂಪಡೆಯಲು ಎರಡು ಅಥವಾ ಮೂರು ಬಾರಿ ಪ್ರಧಾನಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದೇನೆ" ಎಂದು ಮಮತಾ ಬ್ಯಾನರ್ಜಿ ಮಾಹಿತಿ ನೀಡಿದ್ದಾರೆ. 

2019 ರಲ್ಲಿ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದಾಗಿನಿಂದಲೂ ಧನ್ಕರ್-ಟಿಎಂಸಿ ಸರ್ಕಾರದ ನಡುವಿನ ಸಂಬಂಧ ಉತ್ತಮವಾಗಿಲ್ಲ ಎಂಬುದು ಗಮನಾರ್ಹ ಸಂಗತಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com