ಭಾರತದಲ್ಲಿ ಕೊರೋನಾ ಇಳಿಮುಖ: ದೇಶದಲ್ಲಿಂದು 62,480 ಹೊಸ ಕೇಸ್ ಪತ್ತೆ, 1,587 ಮಂದಿ ಸಾವು

ಭಾರತದಲ್ಲಿ ಕೊರೋನಾ 2ನೇ ಅಲೆಯ ಇಳಿಮುಖದ ಹಾದಿ ಎಂದಿನಂತೆ ಮುಂದುವರೆದಿದ್ದು. ಶುಕ್ರವಾರ 62,480 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ ದೇಶದಲ್ಲಿ 1,587 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆಯ ಇಳಿಮುಖದ ಹಾದಿ ಎಂದಿನಂತೆ ಮುಂದುವರೆದಿದ್ದು. ಶುಕ್ರವಾರ 62,480 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ ದೇಶದಲ್ಲಿ 1,587 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಶುಕ್ರವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,97,62,793ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,83,490ಕ್ಕೆ ಏರಿಕೆಯಾಗಿದೆ. 

ಮತ್ತೊಂದೆಡೆ ಸಕ್ರಿಯ ಸೋಂಕಿತರ ಸಂಖ್ಯೆ 7,98,656ಕ್ಕೆ ಕುಸಿದ್ದು, 73 ದಿನಗಳ ಬಳಿಕ ದೇಶದಲ್ಲಿ ದಾಖಲಾಗಿರುವ ಅತೀ ಕನಿಷ್ಠ ಸಕ್ರಿಯ ಸೋಂಕಿತರ ಸಂಖ್ಯೆ ಇದಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 88,977 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ  2,85,80,647ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 19,29,476 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 38,71,67,696 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 26,89,60,399 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com