ಮೇಕೆದಾಟು ಯೋಜನೆಯಲ್ಲಿ ಕರ್ನಾಟಕಕ್ಕೆ ಮಹತ್ವದ ಮುನ್ನಡೆ!

ಕರ್ನಾಟಕಕ್ಕೆ ಮೇಕೆದಾಟು ಯೋಜನೆಯಲ್ಲಿ ಮಹತ್ವದ ಮುನ್ನಡೆಯಾಗಿದೆ. ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ರಾಷ್ಟ್ರೀಯ ಹಸಿರು ಪೀಠ ವಜಾಗೊಳಿಸಿದೆ. 
ಮೇಕೆದಾಟು, ಎನ್ ಜಿಟಿ
ಮೇಕೆದಾಟು, ಎನ್ ಜಿಟಿ

ಬೆಂಗಳೂರು: ಕರ್ನಾಟಕಕ್ಕೆ ಮೇಕೆದಾಟು ಯೋಜನೆಯಲ್ಲಿ ಮಹತ್ವದ ಮುನ್ನಡೆಯಾಗಿದೆ. ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ರಾಷ್ಟ್ರೀಯ ಹಸಿರು ಪೀಠ ವಜಾಗೊಳಿಸಿದೆ. 

ರಾಜ್ಯ ಸರ್ಕಾರ ಅರಣ್ಯ ಇಲಾಖೆಯ ನಿರಾಕ್ಷೇಪಣಾ ಪತ್ರ ಪಡೆಯದೆ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಮುಂದಾಗಿದೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಿದ ರಾಷ್ಟ್ರೀಯ ಹಸಿರು ಪ್ರಾಧಿಕಾರ ಈ ಸಂಬಂಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಪ್ರಕರಣವನ್ನು ಇತ್ಯರ್ಥಗೊಳಿಸಿದೆ.

"ಜಲಾಶಯ ನಿರ್ಮಾಣ ವಿವಾದ ಸುಪ್ರೀಂಕೋರ್ಟ್ ಮುಂದೆ ಬಾಕಿ ಇದೆ ಮತ್ತು ಅರಣ್ಯ ಇಲಾಖೆಯ ಅನುಮತಿ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿ ಬಾಕಿ ಇರುವುದರಿಂದ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಳ್ಳುವ ಅಗತ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಈ ಕುರಿತು ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಈ ಯೋಜನೆಗೆ ತಡೆ ಕೋರುವ ಅರ್ಜಿಯ ವಿಚಾರಣೆ ನಡೆಸಿದ ಎನ್.ಜಿ.ಟಿ ಇಂದು ರಾಜ್ಯದ ವಾದವನ್ನು ಮನ್ನಿಸಿ, ಅರ್ಜಿಯನ್ನು ಇತ್ಯರ್ಥಪಡಿಸಿದೆ. ಆದಷ್ಟು ಶೀಘ್ರದಲ್ಲಿ ಎಲ್ಲ ಅನುಮತಿಗಳನ್ನು ಪಡೆದು ಯೋಜನೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಹಸಿರು ಪೀಠದ ಈ ನಿರ್ಧಾರವನ್ನು ಸ್ವಾಗತಿಸುವುದಾಗಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಈ ಯೋಜನೆಯ ಅನುಷ್ಠಾನದ ಮೂಲಕ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳ ಜನತೆಗೆ ಕುಡಿಯುವ ನೀರು ಪೂರೈಸಲು ನೆರವಾಗಲಿದೆ ಎಂದು ಅವರು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ಇತೀಚೆಗೆ, ನ್ಯಾಯಮೂರ್ತಿ ಕೆ ರಾಮಕೃಷ್ಣನ್ ಮತ್ತು ತಜ್ಞ ಸದಸ್ಯ ಕೆ ಸತ್ಯಗೋಪಾಲ್ ಅವರನ್ನೊಳಗೊಂಡ ಎನ್‌ಜಿಟಿ ಸದರ್ನ್ ಬೆಂಚ್, ಅಗತ್ಯ ಅರಣ್ಯ ಅನುಮತಿ ಪಡೆಯದೆ ಕರ್ನಾಟಕವು ಮೆಕೆಡಾಟಿನಲ್ಲಿ ಅಣೆಕಟ್ಟು ನಿರ್ಮಿಸಲು ತಯಾರಿ ಆರಂಭಿಸಿದೆ ಎಂಬ ಮಾಧ್ಯಮ ವರದಿಯೊಂದನ್ನು ಆಧರಿಸಿ ಸುಮೋಟೋ ಅರ್ಜಿ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com