'ಭಯೋತ್ಪಾದನಾ ವಿರೋಧಿ ಕಾನೂನನ್ನು ಅರ್ಥೈಸಿಕೊಳ್ಳುವುದು ಮುಖ್ಯ'; ವಿದ್ಯಾರ್ಥಿ ಹೋರಾಟಗಾರರ ಜಾಮೀನು ಆದೇಶ ಎತ್ತಿಹಿಡಿದ 'ಸುಪ್ರೀಂ'

ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಭಯೋತ್ಪಾದನಾ-ವಿರೋಧಿ ಕಾನೂನಡಿಯಲ್ಲಿ ಬಂಧಿತರಾಗಿದ್ದ ವಿದ್ಯಾರ್ಥಿ ಹೋರಾಟಗಾರರಿಗೆ ಜಾಮೀನು ನೀಡಿಕೆ ವಿಚಾರವಾಗಿ ದೆಹಲಿ ಹೈಕೋರ್ಟ್ ಬೆನ್ನಿಗೆ ನಿಂತಿರುವ ಸುಪ್ರೀಂ ಕೋರ್ಟ್ ಜಾಮೀನು ಆದೇಶವನ್ನು ಎತ್ತಿಹಿಡಿದಿದೆ.
ವಿದ್ಯಾರ್ಥಿ ಹೋರಾಟಗಾರರು
ವಿದ್ಯಾರ್ಥಿ ಹೋರಾಟಗಾರರು

ನವದೆಹಲಿ: ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಭಯೋತ್ಪಾದನಾ-ವಿರೋಧಿ ಕಾನೂನಡಿಯಲ್ಲಿ ಬಂಧಿತರಾಗಿದ್ದ ವಿದ್ಯಾರ್ಥಿ ಹೋರಾಟಗಾರರಿಗೆ ಜಾಮೀನು ನೀಡಿಕೆ ವಿಚಾರವಾಗಿ ದೆಹಲಿ ಹೈಕೋರ್ಟ್ ಬೆನ್ನಿಗೆ ನಿಂತಿರುವ ಸುಪ್ರೀಂ ಕೋರ್ಟ್ ಜಾಮೀನು ಆದೇಶವನ್ನು ಎತ್ತಿಹಿಡಿದಿದೆ.

ಮೂವರು ವಿದ್ಯಾರ್ಥಿ ಹೋರಾಟಗಾರರಾದ ನತಾಶಾ ನರ್ವಾಲ್, ದೇವಾಂಗನಾ ಹಾಗೂ ಆಸಿಫ್‌ ಇಕ್ಬಾಲ್‌ ರಿಗೆ ದೆಹಲಿ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದೆ. ಅವರು ಜಾಮೀನಿನ ಮುಖಾಂತರ ಜೈಲಿನಿಂದ ಹೊರಗುಳಿಯಲಿದ್ದಾರೆ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. 

ಭವಿಷ್ಯದ ಪ್ರಕರಣಗಳಿಗೆ ಪೂರ್ವನಿದರ್ಶನವಾಗಿ ಬಳಸಲಾಗುವುದಿಲ್ಲ
ಜಾಮೀನು ಆದೇಶವನ್ನು ತಡೆಹಿಡಿಯಬೇಕೆಂದು ಒತ್ತಾಯಿಸಿ ದೆಹಲಿ ಪೊಲೀಸರು ಬುಧವಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ವಿ ರಾಮಸುಬ್ರಮಣಿಯನ್ ಅವರ ರಜಾ ಅವಧಿಯ ಪೀಠವು ಈ ವಿದ್ಯಾರ್ಥಿ ಕಾರ್ಯಕರ್ತರಿಗೆ  ನೀಡಲಾದ ಜಾಮೀನುಗಳು ಸದ್ಯಕ್ಕೆ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

'ಭಯೋತ್ಪಾದನಾ-ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪಿತೂರಿ ಆರೋಪ ಹೊರಿಸಿರುವ ಮೂವರು ಕಾರ್ಯಕರ್ತರಿಗೆ ಜಾಮೀನು ನೀಡಿರುವ ದೆಹಲಿ ಹೈಕೋರ್ಟ್ ತೀರ್ಪನ್ನು ಮುಂದಿನ ಪ್ರಕರಣಗಳಿಗೆ ಪೂರ್ವನಿದರ್ಶನವಾಗಿ ಬಳಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಅಂತೆಯೇ  ಹೈಕೋರ್ಟ್ ತೀರ್ಪಿನ ಕಾನೂನು ಅಂಶಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದ್ದು, ಮುಂದಿನ ತಿಂಗಳು ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಸಾಲಿಸಿಟರ್ ಜನರಲ್ ವಾದವೇನು?
ವಿದ್ಯಾರ್ಥಿ ಕಾರ್ಯಕರ್ತರಿಗೆ ಜಾಮೀನು ನೀಡುವಾಗ ಇಡೀ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅನ್ನು ದೆಹಲಿ ಹೈಕೋರ್ಟ್ ತಲೆಕೆಳಗಾಗಿ ಮಾಡಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಮಂಡಿಸಿದ್ದರು. ಅಲ್ಲದೆ ಈ ವಾದವನ್ನು ಆಲಿಸಿದ ನ್ಯಾಯಪೀಠ, ತೀರ್ಪು 100 ಪುಟಗಳನ್ನು  ಹೊಂದಿದ್ದು, ತೀರ್ಪು ನೀಡಿಕೆಯ ಇಡೀ ಕಾನೂನನ್ನು ಚರ್ಚಿಸಲಾಗುತ್ತದೆ ಎಂದು ಹೇಳಿದೆ.

ಏನಿದು ಘಟನೆ?
ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಜೂನ್ 15ರಂದು ಜವಾಹರ್‌ಲಾಲ್‌ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಂಗನಾ ಕಲಿತಾ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾಲಯದ ವಿದ್ಯಾರ್ಥಿ ಆಸಿಫ್  ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್‌ ಮಂಗಳವಾರ ಜಾಮೀನು ನೀಡಿತ್ತು. ಭಿನ್ನಾಭಿಪ್ರಾಯ, ಪ್ರತಿಭಟನೆಗಳನ್ನು ಹತ್ತಿಕ್ಕುವ ಒತ್ತಡದಲ್ಲಿ ರಾಜ್ಯ ಸರ್ಕಾರವು ಪ್ರತಿಭಟನೆಯ ಹಕ್ಕು ಮತ್ತು ಭಯೋತ್ಪಾದಕ ಚಟುವಟಿಕೆಯ ನಡುವಿನ ರೇಖೆಯನ್ನು ಮಸುಕುಗೊಳಿಸಿದೆ. ಇತಹ ಮನಸ್ಥಿತಿ ಮುಂದುವರೆದರೆ ಅದು "ಪ್ರಜಾಪ್ರಭುತ್ವಕ್ಕೆ ದುಃಖದ ದಿನ" ಎಂದು ಈ ಹಿಂದೆ ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com