ಘಾಜಿಯಾಬಾದ್‌ ವೃದ್ಧನ ಮೇಲೆ ಹಲ್ಲೆ ವಿಡಿಯೋ: ದೆಹಲಿಯಲ್ಲಿ ಸಮಾಜವಾದಿ ಪಕ್ಷದ ಕಾರ್ಯಕರ್ತನ ಬಂಧನ

ತಮ್ಮ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು ವೃದ್ಧ ಮುಸ್ಲಿಂ ವ್ಯಕ್ತಿಯ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಕೋಮು ಸಂಘರ್ಷಕ್ಕೆ ಸಂಚು ರೂಪಿಸಿದ್ದ ಆರೋಪದಡಿ ಸಮಾಜವಾದಿ ಪಕ್ಷದ ಕಾರ್ಯಕರ್ತನೋರ್ವನನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. 
ಉಮ್ಮದ್ ಪಹಲ್ವಾನ್ ಇದ್ರಿಸಿ
ಉಮ್ಮದ್ ಪಹಲ್ವಾನ್ ಇದ್ರಿಸಿ

ಘಾಜಿಯಾಬಾದ್‌: ತಮ್ಮ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು ವೃದ್ಧ ಮುಸ್ಲಿಂ ವ್ಯಕ್ತಿಯ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಕೋಮು ಸಂಘರ್ಷಕ್ಕೆ ಸಂಚು ರೂಪಿಸಿದ್ದ ಆರೋಪದಡಿ ಸಮಾಜವಾದಿ ಪಕ್ಷದ ಕಾರ್ಯಕರ್ತನೋರ್ವನನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. 

ಘಾಜಿಯಾಬಾದ್‌ ನ ಲೋನಿ ಪ್ರದೇಶದಲ್ಲಿ ವೃದ್ಧ ಮುಸ್ಲಿಂ ವ್ಯಕ್ತಿಯ ಗಡ್ಡ ಕತ್ತರಿಸಿ, ಥಳಿಸಿ, ಜೈ ಶ್ರೀ ರಾಮ್ ಘೋಷಣೆ ಕೂಗುವಂತೆ ಯುವಕರ ಗುಂಪು ಹಲ್ಲೆ ನಡೆಸಿತ್ತು ಎಂದು ವೃದ್ಧ ಅಬ್ದುಲ್ ಶಮದ್ ಸೈಫಿ ವಿಡಿಯೋದಲ್ಲಿ ಆರೋಪಿಸಿದ್ದರು. ಈ ವಿಡಿಯೋವನ್ನು ಸವಾಜವಾದಿ ಪಕ್ಷದ ಕಾರ್ಯಕರ್ತ ಉಮ್ಮದ್ ಪಹಲ್ವಾನ್ ಇದ್ರಿಸಿ ಶೇರ್ ಮಾಡಿದ್ದರು. 

ಈ ಸಂಬಂಧ ತಲೆಮರೆಸಿಕೊಂಡಿದ್ದ ಉಮ್ಮದ್ ಪಹಲ್ವಾನ್ ಇದ್ರಿಸಿಯನ್ನು ದೆಹಲಿಯಲ್ಲಿ ಬಂಧಿಸಿದ್ದು ಹೆಚ್ಚಿನ ವಿಚಾರಣೆಗೆ ಕರೆತರಲಾಗುತ್ತಿದೆ ಎಂದ ಘಾಜಿಯಾಬಾದ್‌ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಲೋನಿ ಬಾರ್ಡರ್ ಪೊಲೀಸ್ ಠಾಣೆಯಲ್ಲಿ ಇದ್ರಿಸಿ ವಿರುದ್ದ ಪ್ರಕರಣ ದಾಖಲಾಗಿತ್ತು. ಎಫ್ಐಆರ್ ನಲ್ಲಿ ಇದ್ರಿಸಿ ಅನಗತ್ಯವಾಗಿ ವಿಡಿಯೋವನ್ನು ಶೇರ್ ಮಾಡಿ ಕೋಮು ಸಂಘರ್ಷ ಸೃಷ್ಟಿಸುವ ಸಂಚು ಇತ್ತು ಎಂದು ದಾಖಲಾಗಿದೆ. 

ಇದೇ ಪ್ರಕರಣದ ವಿಚಾರವಾಗಿ ಟ್ವಿಟರ್ ಐಎನ್‌ಸಿ, ಟ್ವಿಟರ್ ಕಮ್ಯುನಿಕೇಷನ್ಸ್ ಇಂಡಿಯಾ, ದಿ ವೈರ್‌ ನ್ಯೂಸ್ ಪೋರ್ಟಲ್, ಪತ್ರಕರ್ತರಾದ ಮೊಹಮ್ಮದ್ ಜುಬೈರ್, ರಾಣಾ ಅಯೂಬ್, ಸಬಾ ನಖ್ವಿ ಮತ್ತು ಕಾಂಗ್ರೆಸ್ ಮುಖಂಡರಾದ ಸಲ್ಮಾನ್ ನಿಜಾಮಿ, ಮಸ್ಕೂರ್ ಉಸ್ಮಾನಿ ಮತ್ತು ವಿಡಿಯೊವನ್ನು ಸಾಮಾಜಿಕ  ಜಾಲತಾಣದಲ್ಲಿ ಹಂಚಿಕೊಂಡ ಸಾಮ ಮೊಹಮ್ಮದ್ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com