ಜೂ.24 ರಂದು ಜಮ್ಮು-ಕಾಶ್ಮೀರದ ಎಲ್ಲಾ ಪಕ್ಷಗಳೊಂದಿಗೆ ಪ್ರಧಾನಿ ಮೋದಿ ಸಭೆ

ಜಮ್ಮು-ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಸುವುದು ಸೇರಿದಂತೆ ರಾಜಕೀಯ ಪ್ರಕ್ರಿಯೆಗಳನ್ನು ನಡೆಸುವುದರ ಸಂಬಂಧ ಜೂ.24 ರಂದು ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದ ಎಲ್ಲಾ ಪಕ್ಷಗಳೊಂದಿಗೆ ಸಭೆ ನಡೆಸಲಿದ್ದಾರೆ. 
ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
ಪ್ರಧಾನಿ ಮೋದಿ (ಸಂಗ್ರಹ ಚಿತ್ರ)

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಸುವುದು ಸೇರಿದಂತೆ ರಾಜಕೀಯ ಪ್ರಕ್ರಿಯೆಗಳನ್ನು ನಡೆಸುವುದರ ಸಂಬಂಧ ಜೂ.24 ರಂದು ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದ ಎಲ್ಲಾ ಪಕ್ಷಗಳೊಂದಿಗೆ ಸಭೆ ನಡೆಸಲಿದ್ದಾರೆ. 

ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಆರ್ಟಿಕಲ್ 370 ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಇಂತಹ ಸಭೆಯೊಂದು ನಡೆಯುತ್ತಿದ್ದು ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಇನ್ನಿತರ ಕೇಂದ್ರದ ನಾಯಕರು ಭಾಗಿಯಾಗಲಿದ್ದಾರೆ.    

ನ್ಯಾಷನಲ್ ಕಾನ್ಫೆನ್ಸ್ (ಎನ್ ಸಿ) ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಜಮ್ಮು-ಕಾಶ್ಮೀರ್ ಅಪ್ನಿ ಪಾರ್ಟಿ (ಜೆಕೆಎಪಿ)ಯ ಅಲ್ತಾಫ್ ಬುಕಾರಿ ಹಾಗೂ ಸಜ್ಜದ್ ಲೋನ್ ಅವರನ್ನು ಸಭೆಗೆ ಆಹ್ವಾನಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ತಮಗೆ ಕೇಂದ್ರದಿಂದ ಕರೆ ಬಂದಿತ್ತು. ಸಭೆಯಲ್ಲಿ ಭಾಗವಹಿಸುವುದರ ಬಗ್ಗೆ ನಾನು ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಸಿಪಿಐ(ಎಂ) ನಾಯಕ ಹಾಗೂ ಪಿಎಜಿಡಿಯ ವಕ್ತಾರ ಎಂವೈ ತಾರಿಗಮಿ ಈ ವರೆಗೂ ತಮಗೆ ಕೇಂದ್ರದಿಂದ ಮಾಹಿತಿ ಲಭ್ಯವಾಗಿಲ್ಲ, ಆದರೆ ಸಭೆ ನಡೆಸಿದರೆ ಅದನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com