ಜೂ. 24ರಂದು ಜಮ್ಮು ಕಾಶ್ಮೀರದ ಪ್ರಾದೇಶಿಕ ಪಕ್ಷಗಳ ಜೊತೆ ಪ್ರಧಾನಿ ಮೋದಿ ಸಭೆ

ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಸೇರಿದಂತೆ ರಾಜಕೀಯ ಪ್ರಕ್ರಿಯೆ ಚುರುಕುಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇದೇ 24ರಂದು ಜಮ್ಮು-ಕಾಶ್ಮೀರದ ಎಲ್ಲಾ 14 ಪ್ರಾದೇಶಿಕ ಪಕ್ಷಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಜಮ್ಮು ಕಾಶ್ಮೀರ ನಾಯಕರು
ಜಮ್ಮು ಕಾಶ್ಮೀರ ನಾಯಕರು

ನವದೆಹಲಿ: ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಸೇರಿದಂತೆ ರಾಜಕೀಯ ಪ್ರಕ್ರಿಯೆ ಚುರುಕುಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇದೇ 24ರಂದು ಜಮ್ಮು-ಕಾಶ್ಮೀರದ ಎಲ್ಲಾ 14 ಪ್ರಾದೇಶಿಕ ಪಕ್ಷಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಆರ್ಟಿಕಲ್ 370ನೇ ತೆಗೆದು ಹಾಕಿದ ನಂತರ ನಡೆಯುತ್ತಿರುವ ಮೊದಲ ಸರ್ವಪಕ್ಷ ಸಭೆ ಇದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷ ಸಭೆ ನಡೆಯುವ ಸಾಧ್ಯತೆ ಇದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ  ಇತರೆ ಹಲವು  ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.

ಪ್ರಧಾನಿ ನಿವಾಸದಲ್ಲಿ ಸರ್ವಪಕ್ಷ ಸಭೆಗೆ ಜಮ್ಮು ಮತ್ತು ಕಾಶ್ಮೀರದ ಪ್ರಾದೇಶಿಕ ಪಕ್ಷಗಳ ನಾಯಕರನ್ನು ಆಹ್ವಾನಿಸಲು ಕೇಂದ್ರಾಡಳಿತ ಪ್ರದೇಶಕ್ಕೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಬಲ್ಲಾ ತೆರಳಿದ್ದರು. 

ಸರ್ವ ಪಕ್ಷ ಸಭೆಯಲ್ಲಿ ಭಾಗವಹಿಸುವಂತೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ, ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಜಮ್ಮು ಮತ್ತು ಕಾಶ್ಮೀರದ ಅಪ್ನಿ ಪಕ್ಷದ ಅಲ್ತಾಫ್ ಬುಖಾರಿ, ಪೀಪಲ್ಸ್ ಕಾನ್ಫರೆನ್ಸ್ ಮುಖ್ಯಸ್ಥ ಸಜ್ಜಾದ್ ಲೋನ್ ಅವರನ್ನು ಆಹ್ವಾನಿಸಲಾಗಿದೆ. 

ಫಾರೂಖ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆಯಾಗುವ ಮುನ್ನ ಜಮ್ಮು-ಕಾಶ್ಮೀರದಲದಲ್ಲಿ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸಿದ್ದರು. 24ರಂದು ಕೇಂದ್ರದ ಸಭೆ ಬಗ್ಗೆ ಕರೆ ಬಂದಿದೆ. ಇನ್ನಷ್ಟೆ  ತೀರ್ಮಾನಿಸಬೇಕಿದೆ  ಎಂದು ಮೆಹಬೂಬಾ ಪ್ರತಿಕ್ರಿಯೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com