ಪಂಜಾಬ್ ಚುನಾವಣೆ-2022: ಸಿಖ್ ಸಮುದಾಯದವರೇ ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ; ಕೇಜ್ರಿವಾಲ್ ಘೋಷಣೆ

ದೆಹಲಿ ಸಿಎಂ ಆಗಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಸಿಖ್ ಸಮುದಾಯದವರೇ ಆಗಿರಲಿದ್ದಾರೆ ಎಂದು ಘೋಷಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ಅಮೃತ್ ಸರ್: ಪಂಜಾಬ್ ವಿಧಾನಸಭೆ ಚುನಾವಣೆ 2022 ರಲ್ಲಿ ನಡೆಯಲಿದ್ದು, ಆಮ್ ಆದ್ಮಿ ಪಕ್ಷ ಚುನಾವಣೆ ಎದುರಿಸಲು ಸಜ್ಜುಗೊಂಡಿದೆ. ದೆಹಲಿ ಸಿಎಂ ಆಗಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಸಿಖ್ ಸಮುದಾಯದವರೇ ಆಗಿರಲಿದ್ದಾರೆ ಎಂದು ಘೋಷಿಸಿದ್ದಾರೆ.

ಸಿಎಂ ಅಭ್ಯರ್ಥಿ ಯಾರು? ಎಂಬ ಪ್ರಶ್ನೆಗೆ ಉತ್ತರಿಸಿರುವ ಕೇಜ್ರಿವಾಲ್, ಪಕ್ಷದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ, ನಿರ್ಧಾರವಾದಾಗ ನಿಮಗೆ ಮಾಹಿತಿ ನೀಡುತ್ತೇವೆ ಎಂದು ಪತ್ರಕರ್ತರಿಗೆ ಕೇಜ್ರಿವಾಲ್ ತಿಳಿಸಿದ್ದಾರೆ.

"ಇಡೀ ಪಂಜಾಬ್ ನಮ್ಮ ಸಿಎಂ ಅಭ್ಯರ್ಥಿ ಬಗ್ಗೆ ಹೆಮ್ಮೆ ಪಡಲಿದೆ, ಅವರು ಸಿಖ್ ಸಮುದಾಯದವರೇ ಆಗಿರುತ್ತಾರೆ" ಎಂದು ಕೇಜ್ರಿವಾಲ್ ಮಾರ್ಮಿಕವಾಗಿ ನುಡಿದಿದ್ದಾರೆ.

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್, ರಾಜ್ಯದಲ್ಲಿ ಈಗಿರುವ ಆಡಳಿತದಿಂದ ಜನತೆ ಬೇಸತ್ತಿದ್ದು ಹೊಸ ರೀತಿಯ ನಾಯಕತ್ವವನ್ನು ಬಯಸುತ್ತಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. 

2015 ರಲ್ಲಿ ಪಂಜಾಬ್ ನ ಕೊಟ್ಕಾಪುರ ಪೊಲೀಸ್ ಫೈರಿಂಗ್ ಪ್ರಕರಣದ ತನಿಖೆ ನಡೆಸಲು ರಚಿಸಿದ್ದ ಎಸ್ಐಟಿಯಲ್ಲಿದ್ದ ಮಾಜಿ ಐಪಿಎಸ್ ಅಧಿಕಾರಿ ಕುನ್ವಾರ್ ವಿಜಯ್ ಪ್ರತಾಪ್ ಸಿಂಗ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೇಜ್ರಿವಾಲ್ ಮಾತನಾಡುತ್ತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com