ಕೋವಿಡ್: ವಾರ್ಷಿಕ ಅಮರನಾಥ ಯಾತ್ರೆ ರದ್ದು; ಆನ್ ಲೈನ್ ‘ಆರತಿ’ಗೆ ಹಾಜರಾಗಲು ಭಕ್ತರಿಗೆ ಅವಕಾಶ

ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ, ಜಮ್ಮು ಮತ್ತು ಕಾಶ್ಮೀರ ಆಡಳಿತವು ವಾರ್ಷಿಕ ಅಮರನಾಥ ಯಾತ್ರೆಯನ್ನು ಕೇವಲ ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೋಮವಾರ ಹೇಳಿದ್ದಾರೆ.
ಅಮರನಾಥ ಯಾತ್ರೆ
ಅಮರನಾಥ ಯಾತ್ರೆ

ಶ್ರೀನಗರ: ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ, ಜಮ್ಮು ಮತ್ತು ಕಾಶ್ಮೀರ ಆಡಳಿತವು ವಾರ್ಷಿಕ ಅಮರನಾಥ ಯಾತ್ರೆಯನ್ನು ಕೇವಲ ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೋಮವಾರ ಹೇಳಿದ್ದಾರೆ.

ಹಿಮಾಲಯದ ಗುಹಾ ದೇವಾಲಯದಲ್ಲಿ ಭಕ್ತರು ಬೆಳಿಗ್ಗೆ ಮತ್ತು ಸಂಜೆ ಆನ್ ಲೈನ್ ಮೂಲಕ ‘ಆರತಿ’ಗೆ ಹಾಜರಾಗಲು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ದೇವಾಲಯದಲ್ಲಿ ಎಲ್ಲಾ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗಳನ್ನು ಈ ಹಿಂದಿನಂತೆಯೇ ನಡೆಸಲಾಗುವುದು ಎಂದು ಸಿನ್ಹಾ ಹೇಳಿದರು.

ಶ್ರೀ ಅಮರನಾಥ ದೇಗುಲ ಮಂಡಳಿಯ ಸದಸ್ಯರೊಂದಿಗೆ ಚರ್ಚಿಸಿದ ನಂತರ ತೀರ್ಥಯಾತ್ರೆಯನ್ನು ಸಾಂಕೇತಿಕವಾಗಿ ಆಚರಿಸಲು ರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com