ಅನಿಲ್ ದೇಶ್ ಮುಖ್ ವಿರುದ್ಧದ ತನಿಖೆಯಲ್ಲಿ ಮಹಾರಾಷ್ಟ್ರ ಸರ್ಕಾರ ಅಸಹಕಾರ: ಹೈಕೋರ್ಟ್ ಗೆ ಸಿಬಿಐ

ಭ್ರಷ್ಟಾಚಾರ ಮತ್ತು ದುರ್ನಡತೆ ಆರೋಪ ಎದುರಿಸುತ್ತಿರುವ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧದ ತನಿಖೆಯಲ್ಲಿ ಮಹಾರಾಷ್ಟ್ರ ಸರ್ಕಾರ ಸಹಕರಿಸುತ್ತಿಲ್ಲ ಎಂದು ಸಿಬಿಐ ಸೋಮವಾರ ಬಾಂಬೆ ಹೈಕೋರ್ಟ್ ಗೆ ಹೇಳಿದೆ.
ಅನಿಲ್ ದೇಶ್ ಮುಖ್
ಅನಿಲ್ ದೇಶ್ ಮುಖ್

ಮುಂಬೈ: ಭ್ರಷ್ಟಾಚಾರ ಮತ್ತು ದುರ್ನಡತೆ ಆರೋಪ ಎದುರಿಸುತ್ತಿರುವ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧದ ತನಿಖೆಯಲ್ಲಿ ಮಹಾರಾಷ್ಟ್ರ ಸರ್ಕಾರ ಸಹಕರಿಸುತ್ತಿಲ್ಲ ಎಂದು ಸಿಬಿಐ ಸೋಮವಾರ ಬಾಂಬೆ ಹೈಕೋರ್ಟ್ ಗೆ ಹೇಳಿದೆ.

ಸಿಬಿಐ ಪರ ನ್ಯಾಯಾಲಯಕ್ಕೆ ಹಾಜರಾದ ಸಾಲಿಸಿಟಿರ್ ಜನರಲ್ ತುಷಾರ್ ಮೆಹ್ತಾ, ಹೈಕೋರ್ಟ್‌ನ ಹಿಂದಿನ ಆದೇಶವನ್ನು ಅನುಸರಿಸಿ ತನಿಖೆ ನಡೆಯುತ್ತಿದ್ದು, ರಾಜ್ಯದ ಆಡಳಿತವನ್ನು ಶುದ್ಧಗೊಳಿಸುವ ಅವಕಾಶವಿದ್ದರೂ ಮಹಾರಾಷ್ಟ್ರ ಸರ್ಕಾರ ಕೇಂದ್ರದ ಏಜೆನ್ಸಿಯೊಂದಿಗೆ ಸಹಕರಿಸಲು ನಿರಾಕರಿಸುತ್ತಿದೆ ಎಂದು ಹೈಕೋರ್ಟ್‌ಗೆ ತಿಳಿಸಿದರು. 

ಮಾಜಿ ಸಹಾಯಕ ಪೊಲೀಸ್ ಇನ್ಸ್ ಪೆಕ್ಟರ್ ಸಚಿನ್ ವಾಜೆ ಪುನರ್ ನೇಮಕ ಸೇರಿದಂತೆ ಹೈಕೋರ್ಟ್ ಆದೇಶವನ್ನು ಮೀರಿ ಸಿಬಿಐ ತನಿಖೆ ನಡೆಸುತ್ತಿದೆ ಎಂಬ ರಾಜ್ಯ ಸರ್ಕಾರದ ಆರೋಪವನ್ನು ಮೆಹ್ತಾ ತಳ್ಳಿ ಹಾಕಿದರು.  ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ದೇಶ್ ಮುಖ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ನಂತರ ಸಿಬಿಐ ತನಿಖೆ ನಡೆಸುತ್ತಿದೆ. 

ಜೈಶ್ರೀ ಪಾಟೀಲ್ ಮುಂಬೈ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಕ್ರಿಮಿನಲ್ ದೂರಿನ ಆಧಾರದ ಮೇಲೆ ದೇಶ್ ಮುಖ್ ವಿರುದ್ಧ ಪ್ರಾಥಮಿಕ ತನಿಖೆ ನಡೆಸುವಂತೆ ಮುಖ್ಯ ನ್ಯಾಯಾಧೀಶ ದೀಪಾಂಕರ್ ದತ್ತ ನೇತೃತ್ವದ ಹೈಕೋರ್ಟ್ ನ್ಯಾಯಪೀಠ, ಏಪ್ರಿಲ್ ನಲ್ಲಿ ಸಿಬಿಐಗೆ ನಿರ್ದೇಶಿಸಿದ ನಂತರ ತನಿಖೆಯನ್ನು ಕೈಗೆತ್ತಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com