ನವೆಂಬರ್ ಅಂತ್ಯದವರೆಗೂ ಉಚಿತ ಪಡಿತರ ಯೋಜನೆ ಮುಂದುವರಿಕೆ: ಕೇಂದ್ರ ಸರ್ಕಾರ

ಮಾರಕ ಕೊರೋನಾ ಸಾಂಕ್ರಾಮಿಕ 2ನೇ ಅಲೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ನವೆಂಬರ್ ತಿಂಗಳ ಅಂತ್ಯದವರೆಗೂ ಉಚಿತ ಪಡಿತರ ವಿತರಣೆಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ.
ಉಚಿತ ಪಡಿತರ ಯೋಜನೆ ಮುಂದುವರಿಕೆ
ಉಚಿತ ಪಡಿತರ ಯೋಜನೆ ಮುಂದುವರಿಕೆ

ನವದೆಹಲಿ: ಮಾರಕ ಕೊರೋನಾ ಸಾಂಕ್ರಾಮಿಕ 2ನೇ ಅಲೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ನವೆಂಬರ್ ತಿಂಗಳ ಅಂತ್ಯದವರೆಗೂ ಉಚಿತ ಪಡಿತರ ವಿತರಣೆಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ.

ಈ ಕುರಿತಂತೆ ಬುಧವಾರ ನಡೆದ ಕೇಂದ್ರ ಸಂಪುಟಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ (PMGKAY) ಅಡಿಯಲ್ಲಿ ವಿತರಿಸಲಾಗುವ ಉಚಿತ ಪಡಿತರವನ್ನು ನವೆಂಬರ್ ಅಂತ್ಯದವರೆಗೂ ವಿಸ್ತರಣೆ ಮಾಡಲು ಸಂಪುಟ ಅನುಮೋದನೆ ನೀಡಿದೆ. ಸರ್ಕಾರದ ಈ  ನಿರ್ಣಯದಿಂದ ದೇಶದ ಸುಮಾರು 80 ಕೋಟಿ ಫಲಾನುಭವಿಗಳು ಇನ್ನೂ 5 ತಿಂಗಳು ಹೆಚ್ಚುವರಿ ಅಂದರೆ ನವೆಂಬರ್ ಅಂತ್ಯದವರೆಗೂ ಉಚಿತ ಪಡಿತರ ಪಡೆಯಬಹುದಾಗಿದೆ.

ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆಯಲ್ಲಿ ಬಡ ಪಿಡಿಎಸ್ (ಸಾರ್ವಜನಿಕ ವಿತರಣಾ ವ್ಯವಸ್ಥೆ) ಫಲಾನುಭವಿಗಳು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಗಳನ್ನು ಕಡಿಮೆ ಮಾಡುವ ಸಲುವಾಗಿ ಈ ವರ್ಷದ ಜೂನ್‌ವರೆಗೆ ಎರಡು ತಿಂಗಳ ಕಾಲ ಪಿಎಂಜಿಕೆ ಯೋಜನೆಯನ್ನು  ಪುನಃ ಪರಿಚಯಿಸಲಾಗಿತ್ತು. ಆದರೆ ಇದೀಗ  ಈ ಯೋಜನೆಯನ್ನು ಮತ್ತೆ 5 ತಿಂಗಳುಗಳಿಗೆ ವಿಸ್ತರಿಸಲಾಗಿದೆ.

ಈ ಹಿಂದೆ ಜೂನ್ 7ರಂದು ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, 'ಪ್ರತಿಯೊಬ್ಬ ಬಡ ನಾಗರಿಕರೊಂದಿಗೆ ಸರ್ಕಾರವೂ ಜೊತೆಗಿರುತ್ತದೆ. ನವೆಂಬರ್‌ವರೆಗೆ ಎಲ್ಲ 80 ಕೋಟಿ ಮಂದಿಗೆ, ಉಚಿತವಾಗಿ ಧಾನ್ಯ ವಿತರಿಸಲಾಗುತ್ತದೆ. ಈ ಯೋಜನೆಯು ದೀಪಾವಳಿವರೆಗೂ ಮುಂದುವರಿಯಲಿದೆ ಎಂದು  ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com