ಜಮ್ಮು-ಕಾಶ್ಮೀರ: ಬಿಎಸ್ಎಫ್ ಗುಂಡೇಟಿಗೆ ಮಾದಕ ವಸ್ತು ಕಳ್ಳಸಾಗಣೆದಾರ ಬಲಿ; 135 ಕೋಟಿ ರೂ. ಬೆಲೆಯ ಹೆರಾಯಿನ್ ವಶ!
ಜಮ್ಮು ಮತ್ತು ಕಾಶ್ಮೀರದ ಸಂಬಾ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‍ಎಫ್) ಯೋಧರು ಮಾದಕ ವಸ್ತು ಕಳ್ಳಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದು, ಕೋಟ್ಯಂತರ ರೂ ಮೌಲ್ಯದ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
Published: 23rd June 2021 10:01 AM | Last Updated: 23rd June 2021 01:07 PM | A+A A-

ಸಂಗ್ರಹ ಚಿತ್ರ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಂಬಾ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‍ಎಫ್) ಯೋಧರು ಮಾದಕ ವಸ್ತು ಕಳ್ಳಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದು, ಕೋಟ್ಯಂತರ ರೂ ಮೌಲ್ಯದ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
ಅಂತಾರಾಷ್ಟ್ರೀಯ ಗಡಿಯ ಹೀರಾನಗರ ವಲಯದ ಪನ್ಸರ್ ಗಡಿ ಔಟ್ ಪೋಸ್ಟ್ ನಲ್ಲಿ ರೂ.135 ಕೋಟಿ ಮೌಲ್ಯದ 27 ಕೆ ಜಿ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಿಎಸ್ ಎಫ್ ವಕ್ತಾರರು ಮಾಹಿತಿ ನೀಡಿದ್ದಾರೆ.
ಇದೇ ವೇಳೆ ಓರ್ವ ಕಳ್ಳಸಾಗಣೆದಾರರ ಗುಂಡೇಟಿಗೆ ಬಲಿಯಾಗಿದ್ದಾನೆ ಎಂದು ಅವರು ಹೇಳಿದ್ದಾರೆ