ಇಸ್ರೇಲ್ ರಾಯಭಾರ ಕಚೇರಿ ಸ್ಫೋಟ: ಲಡಾಖ್ ಮೂಲದ ನಾಲ್ವರು ವಿದ್ಯಾರ್ಥಿಗಳ ಸೆರೆ
ಇಸ್ರೇಲ್ ರಾಯಭಾರ ಕಚೇರಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಕೋಶವು ಲಡಾಖ್ ಮೂಲದ ನಾಲ್ಕು ವಿದ್ಯಾರ್ಥಿಗಳನ್ನು ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
Published: 24th June 2021 08:08 PM | Last Updated: 24th June 2021 08:17 PM | A+A A-

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟದ ಕ್ಷಣ
ನವದೆಹಲಿ: ಇಸ್ರೇಲ್ ರಾಯಭಾರ ಕಚೇರಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಕೋಶವು ಲಡಾಖ್ ಮೂಲದ ನಾಲ್ಕು ವಿದ್ಯಾರ್ಥಿಗಳನ್ನು ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಅವರನ್ನು ಸಾರಿಗೆ ಪರವಾನಗಿ ಮೂಲಕ ದೆಹಲಿಗೆ ಕರೆದೊಯ್ಯಲಾಯಿತು.
ಜನವರಿ 29 ರಂದು ದೆಹಲಿಯ ಹೃದಯಭಾಗದಲ್ಲಿರುವ ಇಸ್ರೇಲಿ ರಾಯಭಾರ ಕಚೇರಿಯ ಹೊರಗೆ ಚಿಕ್ಕ ಪ್ರಮಾಣದ ಐಇಡಿ ಸ್ಫೋಟ ಸಂಭವಿಸಿತ್ತು. ಆದರೆ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.
ರಾಷ್ಟ್ರ ರಾಜಧಾನಿಯ ಅತ್ಯಂತ ಉನ್ನತ ಭದ್ರತಾ ವಲಯವಾದ ಎಪಿಜೆ ಅಬ್ದುಲ್ ಕಲಾಂ ರಸ್ತೆಯ ರಾಯಭಾರ ಕಚೇರಿಯ ಹೊರಗಿನ ಪಾದಚಾರಿ ಮಾರ್ಗದ ಬಳಿ ಸಂಭವಿಸಿದ ಸ್ಫೋಟದಲ್ಲಿ ಕೆಲವು ಕಾರುಗಳು ಹಾನಿಗೊಂಡಿದ್ದವು.