ಮುಂಬೈ: ಕಟ್ಟಡದ ಮೇಲ್ಚಾವಣಿ ಕುಸಿತ, 35 ಮಂದಿ ರಕ್ಷಣೆ

ವಾಣಿಜ್ಯ ನಗರಿ ಮುಂಬೈನಲ್ಲಿ ಐದು ಅಂತಸ್ತಿನ ಕಟ್ಟಡದ ಮೇಲ್ಚಾವಣಿ ಕುಸಿದುಬಿದ್ದಿದ್ದು, ಘಟನೆಯಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದ 35 ಮಂದಿಯನ್ನು ರಕ್ಷಣೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. 
ಸ್ಥಳದಲ್ಲಿ ಕಾರ್ಯಾಚರಮೆ ನಡೆಸುತ್ತಿರುವ ಅಧಿಕಾರಿಗಳು
ಸ್ಥಳದಲ್ಲಿ ಕಾರ್ಯಾಚರಮೆ ನಡೆಸುತ್ತಿರುವ ಅಧಿಕಾರಿಗಳು

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಐದು ಅಂತಸ್ತಿನ ಕಟ್ಟಡದ ಮೇಲ್ಚಾವಣಿ ಕುಸಿದುಬಿದ್ದಿದ್ದು, ಘಟನೆಯಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದ 35 ಮಂದಿಯನ್ನು ರಕ್ಷಣೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. 

ದಕ್ಷಿಣ ಮುಂಬೈನ ಫೋರ್ಟ್ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿ 35 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. 

ವಜು ಕೊಟಕ್ ಮಾರ್ಗ್'ನಲ್ಲಿರುವ ಆಶಾಪುರ ಕಟ್ಟಡದಲ್ಲಿ ಘಟನೆ ಸಂಭವಿಸಿದ್ದು. ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಕಟ್ಟಡ ಮೂರನೇ ಅಂತಸ್ತಿನ ಮೇಲ್ಚಾವಣಿ ಕುಸಿದು ಬಿದ್ದಿತ್ತು. ಇದರ ಪರಿಣಾಮ ಮಹಡಿಯ ಮೆಟ್ಟಿಲುಗಳ ಬಳಿ 35 ಮಂದಿ ಸಿಲುಕಿಕೊಂಡಿದ್ದರು. ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ರಕ್ಷಣೆ ಮಾಡಲಾಯಿತು ಎಂದು ತಿಳಿಸಿದ್ದಾರೆ. 

ಇದು ಹಳೆಯ ಕಟ್ಟಡವಾಗಿದ್ದು, ಮಹಾರಾಷ್ಟ್ರ ವಸತಿ ಮತ್ತು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಟ್ಟಡದ ದುರಸ್ತಿ ಕಾರ್ಯ ಕೈಗೆತ್ತುಕೊಂಡಿದೆ ಎಂದು ಮುಂಬೈ ನಗರದ ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com