ಡೆಲ್ಟಾ ಪ್ಲಸ್ ರೂಪಾಂತರಿಗೆ ಮೊದಲ ಸಾವು: ನಿರ್ಬಂಧ ಸಡಿಲಿಸದಂತೆ ಜಿಲ್ಲೆಗಳಿಗೆ ಮಹಾರಾಷ್ಟ್ರ ಸರ್ಕಾರ ಸೂಚನೆ

ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ತಳಿಯಿಂದ ಮೊದಲ ಸಾವು ಸಂಭವಿಸಿದ್ದು, ಮತ್ತಷ್ಟು ಬಿಗಿ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬಯಿ: ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ತಳಿಯಿಂದ ಮೊದಲ ಸಾವು ಸಂಭವಿಸಿದ್ದು, ಮತ್ತಷ್ಟು ಬಿಗಿ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ. 

ಶುಕ್ರವಾರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ತಳಿ ಹರಡುವಿಕೆ ಮತ್ತು ಪರಿಣಾಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಜತೆಗೆ ಅಗತ್ಯಕ್ಕೆ ಅನುಗುಣವಾಗಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ  ತಿಳಿಸಿದ್ದಾರೆ.

ಕೋವಿಡ್ -19 ಸೋಂಕಿನ ಡೆಲ್ಟಾ ಪ್ಲಸ್ ರೂಪಾಂತರ ತಳಿಯಿಂದಾಗಿ ರತ್ನಾಗಿರಿ ಜಿಲ್ಲೆಯಲ್ಲಿ 80 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ’ ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಹೇಳಿದ್ದಾರೆ. 

ಹೆಚ್ಚು ಅಪಾಯಕಾರಿ ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರ ಹರಡುವುದನ್ನು ತಡೆಗಟ್ಟಲು ಮಹಾರಾಷ್ಟ್ರದ ಎಲ್ಲಾ ಜಿಲ್ಲೆಗಳಲ್ಲೂ 3 ನೇ ಹಂತದ ನಿರ್ಬಂಧಗಳನ್ನು ವಿಧಿಸಬೇಕು ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ ಆದೇಶದಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com