"ಯುಪಿಯಲ್ಲಿ 100 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದೇವೆ: ಅಸಾದುದ್ದೀನ್ ಓವೈಸಿ"
ದೇಶದ ಅತ್ಯಂತ ದೊಡ್ಡ ರಾಜ್ಯವಾಗಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಚುರುಕುಗೊಂಡಿವೆ.
Published: 27th June 2021 08:29 PM | Last Updated: 27th June 2021 08:29 PM | A+A A-

ಅಸಾದುದ್ದೀನ್ ಓವೈಸಿ
ನವದೆಹಲಿ: ದೇಶದ ಅತ್ಯಂತ ದೊಡ್ಡ ರಾಜ್ಯವಾಗಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಚುರುಕುಗೊಂಡಿವೆ.
ಈ ಬಾರಿ ವಿಧಾನಸಭಾ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸುವುದಾಗಿ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಘೋಷಿಸಿದ್ದಾರೆ. ಆಲ್ ಇಂಡಿಯಾ ಮಜ್ಲೀಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಂಐಎಂ) ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಕೂಡ ಮಹತ್ವದ ಹೇಳಿಕೆ ನೀಡಿದ್ದಾರೆ.
ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ 100 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಅವರು ಘೋಷಿಸಿದ್ದಾರೆ. ಅಭ್ಯರ್ಥಿಗಳ ಆಯ್ಕೆಯೂ ಪ್ರಾರಂಭವಾಗಿದೆ. ತಾವು ಓಂ ಪ್ರಕಾಶ್ ರಾಜ್‌ಭರ್ ನೇತೃತ್ವದ ಸಂಕಲ್ಫ್ ಮೋರ್ಚಾದೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ, ಅನ್ಯ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಒವೈಸಿ ಸ್ಪಷ್ಟಪಡಿಸಿದ್ದಾರೆ.