ರೈತರ ಪ್ರತಿಭಟನೆಗೆ ಏಳು ತಿಂಗಳು: ಕೃಷಿ ಕಾಯ್ದೆ ಹಿಂಪಡೆಯುವವರೆಗೆ ಹೋರಾಟ ಮುಂದುವರಿಕೆ ಎಂದು ಪಟ್ಟು ಹಿಡಿದು ಕುಳಿತಿರುವ ಮುಖಂಡರು

ಕೇಂದ್ರ ಸರ್ಕಾರ ತಂದಿರುವ ಕೃಷಿ ಮಸೂದೆ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ರೈತರು ದೆಹಲಿಯ ಗಡಿಭಾಗದಲ್ಲಿ ನಡೆಸುತ್ತಿರುವ ಪ್ರತಿಭಟನೆ ಏಳು ತಿಂಗಳು ಪೂರೈಸಿದೆ. ಆದರೆ ಇನ್ನೂ ರೈತರ ಪ್ರತಿಭಟನೆ, ಹೋರಾಟ ನಿಂತಿಲ್ಲ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್ ಅವರು ಪ್ರತಿಭಟನೆ ಹಿಂಪಡೆಯುವಂತೆ ಎಷ್ಟೇ ಬಾರಿ ಮನವಿ ಮಾಡಿಕೊಂಡರೂ ಕೂಡ ಸರ್ಕಾರ ಮೂರು ನೂತನ ತಿದ್ದುಪಡಿಗಳ
ರೈತರ ಜಂಟಿ ಕಾರ್ಯ ಸಮಿತಿ ಪ್ರತಿಭಟನೆಯಲ್ಲಿ ನಿರತವಾಗಿರುವುದು
ರೈತರ ಜಂಟಿ ಕಾರ್ಯ ಸಮಿತಿ ಪ್ರತಿಭಟನೆಯಲ್ಲಿ ನಿರತವಾಗಿರುವುದು

ನವದೆಹಲಿ: ಕೇಂದ್ರ ಸರ್ಕಾರ ತಂದಿರುವ ಕೃಷಿ ಮಸೂದೆ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ರೈತರು ದೆಹಲಿಯ ಗಡಿಭಾಗದಲ್ಲಿ ನಡೆಸುತ್ತಿರುವ ಪ್ರತಿಭಟನೆ ಏಳು ತಿಂಗಳು ಪೂರೈಸಿದೆ. ಆದರೆ ಇನ್ನೂ ರೈತರ ಪ್ರತಿಭಟನೆ, ಹೋರಾಟ ನಿಂತಿಲ್ಲ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್ ಅವರು ಪ್ರತಿಭಟನೆ ಹಿಂಪಡೆಯುವಂತೆ ಎಷ್ಟೇ ಬಾರಿ ಮನವಿ ಮಾಡಿಕೊಂಡರೂ ಕೂಡ ಸರ್ಕಾರ ಮೂರು ನೂತನ ತಿದ್ದುಪಡಿಗಳನ್ನು ಹಿಂಪಡೆಯುವವರೆಗೆ ತಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.

ಭಾರತೀಯ ಕಿಸಾನ್ ಸಂಘದ ಪ್ರಧಾನ ಕಾರ್ಯದರ್ಶಿ ಯದುವೀರ್ ಸಿಂಗ್, ಕೇಂದ್ರ ಸರ್ಕಾರ ನೂತನ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವವರೆಗೆ ತಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದಿದ್ದಾರೆ.

ಸರ್ಕಾರ ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ಮಾತನಾಡುತ್ತದೆ. ಕಾನೂನಿನಲ್ಲಿ ಯಾವಾಗಲೂ ತಿದ್ದುಪಡಿಯ ಬಗ್ಗೆ ಸರ್ಕಾರ ಮಾತನಾಡುತ್ತದೆ. ಆದರೆ ನಾವು ಅವರನ್ನು ತಿದ್ದುಪಡಿಯನ್ನೇ ಸಂಪೂರ್ಣವಾಗಿ ಹಿಂಪಡೆಯುವಂತೆ ಕೇಳುತ್ತೇವೆ. ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ಹೊಸ ಕಾನೂನನ್ನೇ ಜಾರಿಗೆ ತರಬೇಕೆಂದು ನಾವು ಕೇಳುತ್ತೇವೆ ಎಂದು ಯದುವೀರ್ ಸಿಂಗ್ ಹೇಳಿದ್ದಾರೆ.

ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘದ ರಾಷ್ಟ್ರಾಧ್ಯಕ್ಷ ಶಿವ ಕುಮಾರ್ ಕಕ್ಕ, ಯಾವುದೇ ಪೂರ್ವ ಷರತ್ತುಗಳೊಂದಿಗೆ ನಾವು ಸರ್ಕಾರದ ಜೊತೆ  ಮಾತುಕತೆ ನಡೆಸಲು ಸಾಧ್ಯವಿಲ್ಲ. ಕಳೆದ 7 ತಿಂಗಳಲ್ಲಿ ನಾವು ಸುಮಾರು 600 ರೈತರನ್ನು ಕಳೆದುಕೊಂಡಿದ್ದೇವೆ. ಇಂತಹ ಸಂದರ್ಭದಲ್ಲಿ ನಮಗೆ ಅವರು ಪ್ರತಿಭಟನೆ ಹಿಂಪಡೆಯಿರಿ ಎಂದು ಹೇಳುತ್ತಾರೆ. ಯಾವುದೇ ಪೂರ್ವ ಷರತ್ತುಗಳೊಂದಿಗೆ ಮಾತುಕತೆ ನಡೆಸಲು ಸಾಧ್ಯವೇ ಇಲ್ಲ ಎಂದರು.

ಕೇಂದ್ರ ಸರ್ಕಾರ ಮೂರೂ ತಿದ್ದುಪಡೆ ಕಾಯ್ದೆಗಳನ್ನು ಹಿಂಪಡೆದು ಕನಿಷ್ಠ ಬೆಂಬಲ ಬೆಲೆಯೊಂದಿಗೆ ಹೊಸ ಕಾನೂನನ್ನು ಜಾರಿಗೆ ತಂದರೆ ಸರ್ಕಾರಕ್ಕೆ ಕೃತಜ್ಞತೆ ಹೇಳಿ ಪ್ರತಿಭಟನೆ ಹಿಂಪಡೆದು ನಮ್ಮೂರಿಗೆ ಮರಳುತ್ತೇವೆ ಎಂದು ಹೇಳಿದರು.

ಈಗಾಗಲೇ ಕೇಂದ್ರ ಸರ್ಕಾರ ಮತ್ತು ರೈತರ ನಡುವೆ 11 ಸುತ್ತಿನ ಮಾತುಕತೆ ನಡೆದಿದ್ದು, ಕಳೆದ ಬಾರಿ ಕೊನೆಯ ಮಾತುಕತೆಯಾಗಿದ್ದು ಜನವರಿ 22ರಂದು. ಕಳೆದ ಜನವರಿ 26ರ ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ವೇಳೆ ತೀವ್ರ ಹಿಂಸಾಚಾರ ನಡೆದ ನಂತರ ಸರ್ಕಾರ ಮತ್ತು ರೈತ ಮುಖಂಡರ ಮಧ್ಯೆ ಮಾತುಕತೆ ಏರ್ಪಟ್ಟಿಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com