ಕೋವಿಡ್ ಬಾಧಿತ ವಲಯಗಳಿಗೆ 8 ಅಂಶಗಳ ನೆರವು; ಸಾರ್ವಜನಿಕ ಆರೋಗ್ಯ ವಲಯಕ್ಕೆ 23 ಸಾವಿರ ಕೋಟಿ ರೂ.: ನಿರ್ಮಲಾ ಸೀತಾರಾಮನ್

ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ವಾಣಿಜ್ಯ ವಿಭಾಗದ ಬಹುತೇಕ ವಲಯಗಳು ಸಂಕಷ್ಟಕ್ಕೆ ಸಿಲುಕಿದ್ದು, ಇದೀಗ ಕೇಂದ್ರ ಸರ್ಕಾರ ಕೋವಿಡ್ ಬಾಧಿತ ವಲಯಗಳಿಗೆ ಪರಿಹಾರ ಘೋಷಣೆ ಮಾಡಿದೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ವಾಣಿಜ್ಯ ವಿಭಾಗದ ಬಹುತೇಕ ವಲಯಗಳು ಸಂಕಷ್ಟಕ್ಕೆ ಸಿಲುಕಿದ್ದು, ಇದೀಗ ಕೇಂದ್ರ ಸರ್ಕಾರ ಕೋವಿಡ್ ಬಾಧಿತ ವಲಯಗಳಿಗೆ ಪರಿಹಾರ ಘೋಷಣೆ ಮಾಡಿದೆ.

ಈ ಕುರಿತಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಮಧ್ಯಾಹ್ನ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ಕೋವಿಡ್-19 ಪರಿಹಾರ ಕ್ರಮಗಳನ್ನು ಘೋಷಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಪ್ರಮುಖ 8 ಮಾದರಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದ್ದು, ಅದರಲ್ಲಿ 4 ಹೊಸ  ಘೋಷಣೆ ಇವೆ ಎಂದು ಸಚಿವರು ತಿಳಿಸಿದರು. ಕೋವಿಡ್ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ರೂ ಸಾಲ ಖಾತರಿ ಯೋಜನೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು. ಇನ್ನು ಆರೋಗ್ಯ ಇಲಾಖೆ 50,000 ಕೋಟಿ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. 

ಉಳಿದಂತೆ ನಿರ್ಮಲಾ ಸೀತಾರಾಮನ್ ಅವರ ಸುದ್ದಿಗೋಷ್ಠಿಯ ಪ್ರಮುಖಾಂಶಗಳು ಇಂತಿವೆ.
1.ಆರೋಗ್ಯ ವಲಯಕ್ಕೆ 50,000 ಕೋಟಿ ರೂಪಾಯಿ, ಇತರ ವಲಯಗಳಿಗೆ 60,000 ಸಾವಿರ ಕೋಟಿ ರೂಪಾಯಿ
2. 1.5 ಲಕ್ಷ ಕೋಟಿ ರೂಪಾಯಿ ಹೆಚ್ಚುವರಿ ಮೊತ್ತ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್
3. ಮೈಕ್ರೋಫೈನಾನ್ಸ್​ ಮೂಲಕ 25 ಲಕ್ಷ ಮಂದಿಗೆ ಒದಗಿಸುವ ವ್ಯಕ್ತಿಗಳಿಗೆ ಕ್ರೆಡಿಟ್​ ಗ್ಯಾರಂಟಿ ಯೋಜನೆ ಮೂಲಕ ಸಾಲ ಒದಗಿಸಲಾಗುತ್ತದೆ.
4.11,000ಕ್ಕೂ ಹೆಚ್ಚಯ ನೋಂದಾಯಿತ ಪ್ರವಾಸಿ ಗೈಡ್​ಗಳು/ಟ್ರಾವೆಲ್ ಮತ್ತು ಇತರ ಪ್ರವಾಸೋದ್ಯಮ ವಲಯದಲ್ಲಿ ತೊಡಗಿಕೊಂಡವರಿಗೆ ಶೇ.100ರಷ್ಡು ಸರ್ಕಾರಿ ಶೂರಿಟಿಯೊಂದಿಗೆ 10 ಲಕ್ಷ ರೂಗಳ ವರೆಗೆ ಸಾಲ ಒದಗಿಸಲಾಗುತ್ತದೆ. 
5. 5 ಲಕ್ಷ ಮಂದಿಗೆ ಉಚಿತ ವೀಸಾ ನೀಡುವ ಯೋಜನೆ.
6.ಹೊಸ ಸಾಲವನ್ನು ಕೇಂದ್ರೀಕರಿಸಲು ಕ್ರೆಡಿಟ್ ಗ್ಯಾರಂಟಿ ಯೋಜನೆ
7. ಮಧ್ಯಸ್ಥಗಾರರು ಮತ್ತು 1 ಲಕ್ಷ ರೂ.5,00,000 ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ. ಈ ಯೋಜನೆ 2022 ರ ಮಾರ್ಚ್ 31 ರವರೆಗೆ ಅನ್ವಯವಾಗಲಿದೆ.
8. ಆತ್ಮನಿರ್ಭಾರ ಭಾರತ್ ರೊಜ್ಗರ್ ಯೋಜನೆಯ ವಿಸ್ತರಣೆಯನ್ನು ಸರ್ಕಾರ ಪ್ರಕಟಿಸಿದೆ
9. ಮಕ್ಕಳು ಮತ್ತು ಮಕ್ಕಳ ಆರೈಕೆಯ ಬಗ್ಗೆ ಪ್ರಾಥಮಿಕ ಗಮನಹರಿಸಿ ಸಾರ್ವಜನಿಕ ಆರೋಗ್ಯಕ್ಕಾಗಿ 23,220 ಕೋಟಿ ರೂ ಘೋಷಣೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com