ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆ: ದೇಶದಲ್ಲಿಂದು 37,566 ಹೊಸ ಕೇಸ್ ಪತ್ತೆ, 907 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 37,566 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 907 ಕೋವಿಡ್'ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
Published: 29th June 2021 09:42 AM | Last Updated: 29th June 2021 11:43 AM | A+A A-

ಸಂಗ್ರಹ ಚಿತ್ರ
ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 37,566 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 907 ಕೋವಿಡ್'ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಮಂಗವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,03,16,897ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,97,637ಕ್ಕೆ ಏರಿಕೆಯಾಗಿದೆ.
ಮತ್ತೊಂದೆಡೆ ಸಕ್ರಿಯ ಸೋಂಕಿತರ ಸಂಖ್ಯೆ 5,52,659ಕ್ಕೆ ಕುಸಿದ್ದು, ಹಲವು ದಿನಗಳ ಬಳಿಕ ದೇಶದಲ್ಲಿ ದಾಖಲಾಗಿರುವ ಅತಿ ಕನಿಷ್ಠ ಸಕ್ರಿಯ ಸೋಂಕಿತರ ಸಂಖ್ಯೆ ಇದಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 56,994 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,93,66,601ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 17,68,008 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 40,81,39,287 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 32,36,63,297 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.