ಭಾರತೀಯ ವಾಯುಪಡೆ ಕೇಂದ್ರದ ಮೇಲೆ ಡ್ರೋಣ್ ದಾಳಿ: ಎನ್‌ಐಎಗೆ ತನಿಖೆಯ ಹೊಣೆ ನೀಡಿದ ಕೇಂದ್ರ ಗೃಹ ಸಚಿವಾಲಯ
ಭಾರತೀಯ ವಾಯುಪಡೆ ಕೇಂದ್ರದ ಮೇಲೆ ನಡೆಸಲಾದ ಡ್ರೋಣ್ ದಾಳಿ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.
Published: 29th June 2021 09:56 AM | Last Updated: 29th June 2021 09:56 AM | A+A A-

ಸಂಗ್ರಹ ಚಿತ್ರ
ನವದೆಹಲಿ: ಭಾರತೀಯ ವಾಯುಪಡೆ ಕೇಂದ್ರದ ಮೇಲೆ ನಡೆಸಲಾದ ಡ್ರೋಣ್ ದಾಳಿ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಡ್ರೋಣ್ ದಾಳಿ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಎನ್ಐಎ ತನಿಖೆಗೆ ನೀಡಿರುವುದಾಗಿ ವರದಿಗಳು ತಿಳಿಸಿವೆ.
ಡ್ರೋಣ್ ಗಳನ್ನು ಬಳಸಿಕೊಂಡು ಗಡಿಯಾಚೆಯಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಶಸ್ತ್ರಾಸ್ತ್ರ, ಸ್ಫೋಟಕ ಪದಾರ್ಥ, ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಉಗ್ರರು ಇದೀಗ ಅದೇ ಡ್ರೋಣ್ ಬಳಸಿ ಜಮ್ಮು ಏರ್ಪೋರ್ಟ್ ನ ಒಂದು ಭಾಗದಲ್ಲಿರುವ ಭಾರತೀಯ ವಾಯುಪಡೆ ಸ್ಟೇಷನ್ ಮೇಲೆ ಭಾನುವಾರ ದಾಳಿ ನಡೆಸಿದ್ದರು. ಉಗ್ರರ ಈ ದುಷ್ಕೃತ್ಯ ಇದೀಗ ತೀವ್ರ ಆತಂಕವನ್ನು ಸೃಷ್ಟಿಸಿದೆ.
ಭಾನುವಾರ ಬೆಳಗಿನ ಜಾವ 1.40ರ ವೇಳೆಗೆ ಸ್ಫೋಟಕಗಳನ್ನು ಕಟ್ಟಲಾಗಿದ್ದ 2 ಡ್ರೋಣ್ ಗಳು ವಾಯುಪಡೆ ಕೇಂದ್ರದ ಮೇಲೆ ದಾಳಿ ನಡೆಸಿದ್ದವು.
ಪಾಕ್ ಸೇನೆ ಹಾಗೂ ಪಾಕ್ ಗುಪ್ತಚರ ಸಂಸ್ಥೆ ಐಎಸ್ಐ ಕುಮ್ಮಕ್ಕಿನಿಂದ ಜಿಪಿಎಸ್ ಹೊಂದಿದ್ದ ಡ್ರೋಣ್ ಗಳನ್ನು ಉಗ್ರರು ಬಳಸಿ ಸ್ಫೋಟಕ ಕಳಿಸಿರುವ ಶಂಕೆಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಎನ್ಐಎಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.