ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದ ಅಮಿತ್ ಶಾ

ಪ್ರಧಾನಿ ನರೇಂದ್ರ ಮೋದಿ ನಂತರ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಕೋವಿಡ್-19 ಲಸಿಕೆಯ ಮೊದಲ ಡೋಸ್ ನ್ನು ಪಡೆದುಕೊಂಡಿದ್ದಾರೆ. ಮೆದಾಂತ ಆಸ್ಪತ್ರೆ ವೈದ್ಯರಿಂದ ಶಾ ಲಸಿಕೆ ಪಡೆದಿದ್ದಾರೆ.

Published: 01st March 2021 08:15 PM  |   Last Updated: 01st March 2021 08:15 PM   |  A+A-


Amitsha1

ಕೇಂದ್ರ ಗೃಹ ಸಚಿವ ಅಮಿತ್ ಶಾ

Posted By : Nagaraja AB
Source : PTI

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಂತರ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಕೋವಿಡ್-19 ಲಸಿಕೆಯ ಮೊದಲ ಡೋಸ್ ನ್ನು ಪಡೆದುಕೊಂಡಿದ್ದಾರೆ. ಮೆದಾಂತ ಆಸ್ಪತ್ರೆ ವೈದ್ಯರಿಂದ ಶಾ ಲಸಿಕೆ ಪಡೆದಿದ್ದಾರೆ.

ಕೋವಿಡ್ ನಿರೋಧಕ ಲಸಿಕೆ ಪಡೆಯುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತಿತರ ಸಚಿವರುಗಳ ಗುಂಪಿಗೆ ಅಮಿತ್ ಶಾ ಸೇರಿಕೊಂಡಿದ್ದಾರೆ. ಮುಖ್ಯಮಂತ್ರಿಗಳಾದ ನಿತೀಶ್ ಕುಮಾರ್, ನವೀನ್ ಪಟ್ನಾಯಕ್ ಕೂಡಾ ಲಸಿಕೆ ಪಡೆದಿದ್ದಾರೆ.

ವಿದೇಶಾಂಗ ಸಚಿವ ಡಾ.ಎಸ್. ಜೈ ಶಂಕರ್ ಕೂಡಾ ಕೋವಿಡ್-19  ಲಸಿಕೆ ಪಡೆದಿದ್ದು, ಸುರಕ್ಷಿತ ಭಾವ ಮೂಡಿರುವುದಾಗಿ ತಿಳಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp