ವಿದ್ಯಾರ್ಥಿನಿಯರ ಜೊತೆ ಕುಣಿದ ರಾಹುಲ್ ಗಾಂಧಿ, ಡ್ಯಾನ್ಸ್ ನೋಡಿ ಸಂಭ್ರಮಿಸಿದ ಸಭಿಕರು, ವಿಡಿಯೋ ವೈರಲ್!

ಮೀನುಗಾರರ ಜೊತೆ ಸಮುದ್ರಕ್ಕೆ ಜಿಗಿದು ಏಂಜಾಯ್ ಮಾಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಇದೀಗ ವೇದಿಕೆ ಮೇಲೆ ವಿದ್ಯಾರ್ಥಿಗಳ ಜೊತೆ ಕುಣಿದಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Published: 01st March 2021 03:39 PM  |   Last Updated: 01st March 2021 03:39 PM   |  A+A-


Rahul Gandhi

ರಾಹುಲ್ ಗಾಂಧಿ

Posted By : Vishwanath S
Source : Online Desk

ಚೆನ್ನೈ: ಮೀನುಗಾರರ ಜೊತೆ ಸಮುದ್ರಕ್ಕೆ ಜಿಗಿದು ಏಂಜಾಯ್ ಮಾಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಇದೀಗ ವೇದಿಕೆ ಮೇಲೆ ವಿದ್ಯಾರ್ಥಿಗಳ ಜೊತೆ ಕುಣಿದಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಚುನಾವಣೆ ಸಂಬಂಧ ತಮಿಳುನಾಡು ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ಸೇಂಟ್ ಜೋಸೆಫ್ ಹೈಯರ್ ಸೆಕೆಂಡರಿ ಸ್ಕೂಲ್ ಮುಲಾಗುಮುದಬ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿನಿಯರ ಜೊತೆ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರು ರಾಹುಲ್ ಗೆ ಸಾಥ್ ನೀಡಿದರು. 

ತಮಿಳುನಾಡು ಮತ್ತು ಕೇರಳದಲ್ಲಿ ಏಪ್ರಿಲ್ 6ರಂದು ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಎರಡು ರಾಜ್ಯಗಳಲ್ಲಿ ಚುನಾವಣೆಗಾಗಿ ಭರ್ಜರಿ ತಯಾರಿ ನಡೆಸಿದ್ದಾರೆ. ಅಲ್ಲದೆ ಈ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp