
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ಮೀರತ್: ವಿವಾದಾತ್ಮಕ ಮೂರು ಕೃಷಿ ಕಾನೂನುಗಳು ರೈತರಿಗೆ ಡೆತ್ ವಾರೆಂಟ್ ಆಗಲಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ.
ನೂತನ ಕಾನೂನುಗಳ ವಿರುದ್ಧ ಆಮ್ ಆದ್ಮಿ ಪಕ್ಷ ಆಯೋಜಿಸಿದ್ದ ಕಿಸಾನ್ ಮಹಾ ಪಂಚಾಯತ್ ಉದ್ದೇಶಿಸಿ ಮಾತನಾಡಿದ ಅವರು, ಬಂಡವಾಳಷಾಹಿಗಳು ರೈತರ ಜಮೀನುಗಳನ್ನು ಪಡೆದು, ಅವರಿಗೆ ಕಾರ್ಮಿಕರ ಸಮಸ್ಯೆಯನ್ನುಂಟು ಮಾಡಲಿದ್ದಾರೆ ಎಂದರು.
ತಮ್ಮ ಜಮೀನುಗಳನ್ನು ಬಂಡವಾಳ ಷಾಹಿಗಳು ಕೈಗೆ ನೀಡಲು ಒಪ್ಪದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 25 ವರ್ಷಗಳಲ್ಲಿ ಮೂರುವರೆ ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರೈತರಿಗೆ ಮೋಸ ಮಾಡಿದೆ ಎಂದು ಆರೋಪಿಸಿದ ಕೇಜ್ರಿವಾಲ್, ಪ್ರಸ್ತುತ ದೇಶಾದ್ಯಂತ ರೈತರು ಕಿರುಕುಳ ಅನುಭವಿಸುತ್ತಿದ್ದಾರೆ. ರೈತರ ಚಳವಳಿ ತಡೆಯಲು ರಸ್ತೆಗಳಲ್ಲಿ ಮೊಳೆಗಳನ್ನು ಹೊಡೆಯಲಾಗುತ್ತಿದೆ. ಅವರ ವಿರುದ್ಧ ಜಲ ಪ್ರಯೋಗ ಮಾಡಲಾಗುತ್ತಿದೆ ಎಂದರು.