ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹ್ವಾಣ್ ನಿಧನ!

ಮಾರಕ ಕೊರೋನಾ ವೈರಸ್ ಸೋಂಕಿಗೆ ಮತ್ತೋರ್ವ ಜನಪ್ರತಿನಿಧಿ ಬಲಿಯಾಗಿದ್ದು, ಸೋಂಕಿಗೆ ತುತ್ತಾಗಿದ್ದ ಮಧ್ಯ ಪ್ರದೇಶದ ಖಂಡ್ವಾ ಕ್ಷೇತ್ರದ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹ್ವಾಣ್ ನಿಧನರಾಗಿದ್ದಾರೆ.

Published: 02nd March 2021 10:56 AM  |   Last Updated: 02nd March 2021 12:52 PM   |  A+A-


BJP MP NandKumar Singh Chauhan

ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹ್ವಾಣ್

Posted By : Srinivasamurthy VN
Source : ANI

ಭೋಪಾಲ್: ಮಾರಕ ಕೊರೋನಾ ವೈರಸ್ ಸೋಂಕಿಗೆ ಮತ್ತೋರ್ವ ಜನಪ್ರತಿನಿಧಿ ಬಲಿಯಾಗಿದ್ದು, ಸೋಂಕಿಗೆ ತುತ್ತಾಗಿದ್ದ ಮಧ್ಯ ಪ್ರದೇಶದ ಖಂಡ್ವಾ ಕ್ಷೇತ್ರದ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹ್ವಾಣ್ ನಿಧನರಾಗಿದ್ದಾರೆ.

ನಂದಕುಮಾರ್ ಸಿಂಗ್ ಚೌಹ್ವಾಣ್ ಅವರು ಸೋಂಕಿಗೆ ತುತ್ತಾಗಿದ್ದರು. ಅವರನ್ನು ದೆಹಲಿ-ಎನ್ ಸಿಆರ್ ನಲ್ಲಿರುವ ಮೆದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. 

ಇನ್ನು ನಂದಕುಮಾರ್ ಸಿಂಗ್ ಚೌಹ್ವಾಣ್ ಅವರ ಸಾವಿಗೆ ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್ ಮತ್ತು ಪ್ರಧಾನಿ ಮೋದಿ ಕಂಬನಿ ಮಿಡಿದಿದ್ದಾರೆ. ನಂದಕುಮಾರ್ ಸಿಂಗ್ ಚೌಹ್ವಾಣ್ ಅವರ ಸಾವಿನಿಂದಾಗಿ ಅತೀವ ದುಃಖವಾಗಿದೆ. ಬಿಜೆಪಿ ಆದರ್ಶ ಕೆಲಸಗಾರ, ಸಮರ್ಥ ಸಂಘಟಕ ಮತ್ತು ಸಮರ್ಪಿತ ನಾಯಕನನ್ನು ಕಳೆದುಕೊಂಡಿದೆ. ಇದು ನನಗೆ ವೈಯಕ್ತಿಕ ನಷ್ಟ ಎಂದು ಹೇಳಿದ್ದಾರೆ.

ಇದೇ ವಿಚಾರವಾಗಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು,  'ಖಂಡ್ವಾದ ಲೋಕಸಭಾ ಸಂಸದ ನಂದಕುಮಾರ್ ಸಿಂಗ್ ಚೌಹ್ವಾಣ್ ಅವರ ನಿಧನದಿಂದ ಅತೀವ ನೋವಾಗಿದೆ. ಸಂಸತ್ತಿನ ನಡಾವಳಿಗಳು, ಸಾಂಸ್ಥಿಕ ಕೌಶಲ್ಯಗಳು ಮತ್ತು ಮಧ್ಯಪ್ರದೇಶದಾದ್ಯಂತ ಬಿಜೆಪಿಯನ್ನು ಬಲಪಡಿಸುವ ಪ್ರಯತ್ನಗಳಿಗೆ ಅವರು ನೀಡಿದ ಕೊಡುಗೆಗಳು ಅವಿಸ್ಮರಣೀಯ ಎಂದು ಹೇಳಿರುವ ಪ್ರಧಾನಿ ಮೋದಿ ಅವರ  ಚೌಹ್ವಾಣ್ ಅವರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. 
 

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp