ತನಿಖಾ ಏಜೆನ್ಸಿಗಳ ಕಚೇರಿಗಳಲ್ಲಿ ಸಿಸಿಟಿವಿ ಅಳವಡಿಕೆ: ಕೇಂದ್ರದ ವಿಳಂಬ ನೀತಿ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ

ಸಿಬಿಐ, ಇಡಿ ಮತ್ತು ಎನ್ ಐಎ ಒಳಗೊಂಡಂತೆ ತನಿಖಾ ಏಜೆನ್ಸಿಗಳ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆಗೆ ಸಂಬಂಧಿಸಿದಂತೆ ಹೆಚ್ಚಿನ ಸಮಯಾವಕಾಶವನ್ನು ಕೇಂದ್ರ ಸರ್ಕಾರ ಕೇಳಿರುವುದಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ.

Published: 02nd March 2021 07:37 PM  |   Last Updated: 02nd March 2021 07:45 PM   |  A+A-


Supreme_Court1

ಸುಪ್ರೀಂಕೋರ್ಟ್

Posted By : Nagaraja AB
Source : The New Indian Express

ನವದೆಹಲಿ: ಸಿಬಿಐ, ಇಡಿ ಮತ್ತು ಎನ್ ಐಎ ಒಳಗೊಂಡಂತೆ ತನಿಖಾ ಏಜೆನ್ಸಿಗಳ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆಗೆ ಸಂಬಂಧಿಸಿದಂತೆ ಹೆಚ್ಚಿನ ಸಮಯಾವಕಾಶವನ್ನು ಕೇಂದ್ರ ಸರ್ಕಾರ ಕೇಳಿರುವುದಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ಆರ್ ಎಫ್ ನಾರಿಮನ್ ನೇತೃತ್ವದ ನ್ಯಾಯಪೀಠ, ಈ ವಿಷಯವು ನಾಗರಿಕರ ಹಕ್ಕುಗಳಿಗೆ ಸಂಬಂಧಿಸಿದೆ ಎಂದು ಅಭಿಪ್ರಾಯಪಟ್ಟಿದೆ. ಈ ವಿಷಯದಲ್ಲಿ ಮುಂದೂಡಿಕೆ ಕೋರಿ, ಕೇಂದ್ರ ಸರ್ಕಾರ ಸಲ್ಲಿಸಿದ ಪತ್ರದಲ್ಲಿ ನೀಡಲಾದ ನೆಪಗಳನ್ನು ಸ್ವೀಕರಿಸಲಾಗದು ಎಂದು ಹೇಳಿದೆ.

ಸಿಸಿಟಿವಿ ಅಳವಡಿಸದೆ ಸುಮ್ಮನೆ ಕಾಲಹರಣ ಮಾಡುತ್ತಿದ್ದೀರಿ ಎಂದು ನ್ಯಾಯಾಧೀಶರಾದ ಬಿಆರ್ ಗವಾಯಿ ಮತ್ತು ಹೃಷಿಕೇಶ್ ರಾಯ್ ಅವರನ್ನೊಳಗೊಂಡ ಪೀಠ, ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಹೇಳಿದೆ. 

ಸಿಬಿಐ, ರಾಷ್ಟ್ರೀಯ ವಿಚಾರಣಾ ಏಜೆನ್ಸಿ, ಇಡಿ ಮತ್ತಿತರ ಕೇಂದ್ರೀಯ ತನಿಖಾ ಸಂಸ್ಥೆಗಳ ಕಚೇರಿಗಳಲ್ಲಿ  ಸಿಸಿಟಿವಿ ಕ್ಯಾಮರಾಗಳು ಮತ್ತು ಹೇಳಿಕೆ ದಾಖಲು ಸಲಕರಣಗಳನ್ನು ಅಳವಡಿಸಬೇಕೆಂದು ಕಳೆದ ವರ್ಷದ ಡಿಸೆಂಬರ್ 2 ರಂದು ಅಪೆಕ್ಸ್ ಕೋರ್ಟ್ ನಿರ್ದೇಶನ ನೀಡಿತ್ತು.

ಈ ವಿಚಾರವು ಹೆಚ್ಚಿನ ಪರಿಣಾಮ ಬೀರಬಹುದೆಂದು ತುಷಾರ್ ಮೆಹ್ತಾ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ವಿಚಾರಣೆ ವೇಳೆಯಲ್ಲಿ ಹೇಳಿದರು. ಇದು ನಾಗರಿಕ ಹಕ್ಕಗಳಿಗೆ ಸಂಬಂಧಿಸಿದೆಯೇ ಎಂದು ಕೇಳಿದ ನ್ಯಾಯಾಲಯ, ನೆಪಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸಲು ಸಮಾಯವಕಾಶವನ್ನು ಮೆಹ್ತಾ ಕೋರಿದರು. ಅಫಿಡವಿಟ್ ಸಲ್ಲಿಸಲು ಮೂರು ವಾರಗಳ ಸಮಾಯವಕಾಶವನ್ನು ಸುಪ್ರೀಂಕೋರ್ಟ್ ನೀಡಿತು. 

Stay up to date on all the latest ರಾಷ್ಟ್ರೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp