2030ರ ವೇಳೆಗೆ 23 ಜಲಮಾರ್ಗಗಳು ಕಾರ್ಯಗತ- ಪ್ರಧಾನಿ ನರೇಂದ್ರ ಮೋದಿ

ಕೇಂದ್ರ ಸರ್ಕಾರ 2030 ರ ವೇಳೆಗೆ 23 ಜಲಮಾರ್ಗಗಳನ್ನು ಕಾರ್ಯಗತಗೊಳಿಸುವ ಗುರಿ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Published: 02nd March 2021 11:04 PM  |   Last Updated: 02nd March 2021 11:07 PM   |  A+A-


PM_Modi1

ಪ್ರಧಾನಿ ನರೇಂದ್ರ ಮೋದಿ

Posted By : Nagaraja AB
Source : UNI

ನವದೆಹಲಿ: ಕೇಂದ್ರ ಸರ್ಕಾರ 2030 ರ ವೇಳೆಗೆ 23 ಜಲಮಾರ್ಗಗಳನ್ನು ಕಾರ್ಯಗತಗೊಳಿಸುವ ಗುರಿ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

'ಮ್ಯಾರಿಟೈಮ್ ಇಂಡಿಯಾ ಶೃಂಗಸಭೆ 2021' ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ  ಮೋದಿ,  ಕೇಂದ್ರ ಸರ್ಕಾರ ಹಿಂದೆಂದೂ ಕಾಣದ ರೀತಿಯಲ್ಲಿ ಜಲಮಾರ್ಗಗಳಲ್ಲಿ ಹೂಡಿಕೆ ಮಾಡುತ್ತಿದೆ. ದೇಶೀಯ ಜಲಮಾರ್ಗಗಳು ಸರಕು ಸಾಗಣೆಗೆ ವೆಚ್ಚ ಪರಿಣಾಮಕಾರಿ ಮತ್ತು ಪರಿಸರ ಸ್ನೇಹಿ ಮಾರ್ಗಗಳಾಗಿವೆ. 2030 ರ ವೇಳೆಗೆ 23 ಜಲಮಾರ್ಗಗಳನ್ನು ಕಾರ್ಯಗತಗೊಳಿಸುವ ಗುರಿ ಹೊಂದಿದ್ದೇವೆ ಎಂದರು.

ದೇಶದ ಕರಾವಳಿ ಪ್ರದೇಶದಲ್ಲಿ 189 ದೀಪಸ್ತಂಭಗಳನ್ನು ಹೊಂದಿದೆ. ಈ ಪೈಕಿ 78 ದೀಪಸ್ತಂಭಗಳ ಪಕ್ಕದ ಭೂಮಿಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ಕಾರ್ಯಕ್ರಮ ರೂಪಿಸಲಾಗಿದೆ. ಈ ಉಪಕ್ರಮದ ಪ್ರಮುಖ ಉದ್ದೇಶವೆಂದರೆ ಅಸ್ತಿತ್ವದಲ್ಲಿರುವ ಲೈಟ್ ಹೌಸ್ ಗಳು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಯನ್ನು ಅನನ್ಯ ಕಡಲ ಪ್ರವಾಸೋದ್ಯಮ ಹೆಗ್ಗುರುತುಗಳಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮೋದಿ ಮಾಹಿತಿ ನೀಡಿದರು.

ಪ್ರಮುಖ ರಾಜ್ಯಗಳು ಮತ್ತು ಕೊಚ್ಚಿ, ಮುಂಬೈ, ಗುಜರಾತ್ ಮತ್ತು ಗೋವಾದ ನಗರಗಳಲ್ಲಿ ನಗರ ಜಲ ಸಾರಿಗೆ ವ್ಯವಸ್ಥೆಯನ್ನು ಪರಿಚಯಿಸಲು ಸಹ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಘೋಷಿಸಿದರು.

Stay up to date on all the latest ರಾಷ್ಟ್ರೀಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp