ಕೋವಿಡ್-19: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಫಾರೂಕ್ ಅಬ್ದುಲ್ಲಾ, ಕೋಚ್ ರವಿಶಾಸ್ತ್ರಿ ಸೇರಿದಂತೆ ಹಲವರಿಗೆ ಲಸಿಕೆ!

ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ರವಿಶಾಸ್ತ್ರಿ ಸೇರಿದಂತೆ ಹಲವು ಗಣ್ಯರು ಕೋವಿಡ್ ಲಸಿಕೆ ಪಡೆದರು.

Published: 02nd March 2021 12:38 PM  |   Last Updated: 02nd March 2021 12:38 PM   |  A+A-


COVID-19 vaccination

ಕೋವಿಡ್ ಲಸಿಕೆ ನೋಂದಣಿ

Posted By : Srinivasamurthy VN
Source : ANI

ನವದೆಹಲಿ: ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಆರಂಭಿಸಿರುವ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ ಮುಂದುವರೆದಿದ್ದು, ಇಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ರವಿಶಾಸ್ತ್ರಿ ಸೇರಿದಂತೆ ಹಲವು ಗಣ್ಯರು ಕೋವಿಡ್ ಲಸಿಕೆ ಪಡೆದರು.

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಈ ಹಂತಕ್ಕೆ ಚಾಲನೆ ನೀಡಿದರು. ಬಳಿಕ ಉಪ ರಾಷ್ಟ್ಪಪತಿ ವೆಂಕಯ್ಯ ನಾಯ್ಡು, ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌, ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮುಂತಾದ ಅನೇಕ ಗಣ್ಯರು ಕೋವಿಡ್‌–19 ಲಸಿಕೆಯ ಮೊದಲ ಡೋಸ್‌ ಹಾಕಿಸಿಕೊಂಡಿದ್ದರು. ಇಂದು ಲಸಿಕೆ ವಿತರಣೆ ಮುಂದುವರೆದಿದ್ದು, ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ರವಿಶಾಸ್ತ್ರಿ ಸೇರಿದಂತೆ ಹಲವು ಗಣ್ಯರು ಕೋವಿಡ್ ಲಸಿಕೆ ಪಡೆದರು.

ಮೂರನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ವರ್ಷ ದಾಟಿದ ಇತರೆ ಅನಾರೋಗ್ಯ ಸಂಬಂಧಿತ ಸಮಸ್ಯೆಗಳಿರುವ ವ್ಯಕ್ತಿಗಳಿಗೆ ಲಸಿಕೆ ನೀಡಿಕೆ ಆರಂಭಿಸಲಾಗಿದೆ. ಈ ಹಂತದಲ್ಲಿ ದೇಶದಲ್ಲಿರುವ ಸುಮಾರು 27 ಕೋಟಿ ಮಂದಿ ಫಲಾನುಭವಿಗಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಯೋಜನೆ ಹಾಕಿಕೊಂಡಿದೆ. 

ಇದರ ಮುಂದುವರೆದ ಭಾಗವಾಗಿ ಲಸಿಕೆ ನೀಡಿಕೆ ಮುಂದುವರೆಸಿದ್ದು, ಇಂದು ದೆಹಲಿಯ ಹಾರ್ಟ್ ಅಂಡ್ ಲಂಗ್ಸ್ ಇನ್ಸ್ ಟಿಟ್ಯೂಟ್ ನಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಮತ್ತು ಅವರ ಪತ್ನಿ ತಮ್ಮ ಮೊದಲ ಡೋಸ್ ಲಸಿಕೆ ಪಡೆದರು. ಅಂತೆಯೇ ಕೇಂದ್ರ ಅಲ್ಪ ಸಂಖ್ಯಾತ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಅವರು ಉತ್ತರ ಪ್ರದೇಶದ ರಾಮ್ ಪುರ್ ನಲ್ಲಿನ ಲಸಿಕೆ ವಿತರಣಾ ಕೇಂದ್ರಕ್ಕೆ ತೆರಳಿ ತಮ್ಮ ಮೊದಲ ಡೋಸ್ ಲಸಿಕೆ ಪಡೆದರು. 

ಅಂತೆಯೇ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಅವರು ಶ್ರೀನಗರದಲ್ಲಿರುವ ಶೇರ್ ಇ ಕಾಶ್ಮೀರ್ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ತೆರಳಿ ಲಸಿಕೆ ಪಡೆದರು. ಇತ್ತ ತೆಲಂಗಾಣದಲ್ಲಿ ಟಿಆರ್ ಎಸ್ ಸಂಸದ ಕೆ ಕೇಶವರಾವ್ ಅವರು ಹೈದರಾಬಾದ್ ನಲ್ಲಿರುವ ಲಸಿಕೆ ವಿತರಣಾ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆದರು. 

ಇನ್ನು ಇಂಗ್ಲೆಂಡ್ ವಿರುದ್ಧದ ಸರಣಿ ನಿಮಿತ್ತ ಅಹ್ಮದಾಬಾದ್ ನಲ್ಲಿರುವ ಟೀಂ ಇಂಡಿಯಾ ಪ್ರಧಾನ ಕೋಚ್ ರವಿಶಾಸ್ತ್ರಿ ಅವರೂ ಕೂಡ ಲಸಿಕೆ ಪಡೆದಿದ್ದು, ಅಹ್ಮದಾಬಾದ್ ಅಪೋಲೋ ಆಸ್ಪತ್ರೆಯಲ್ಲಿ ತಮ್ಮ ಮೊದಲ ಡೋಸ್ ಲಸಿಕೆ ಪಡೆದರು. 

Stay up to date on all the latest ರಾಷ್ಟ್ರೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp