ಕೋವಿಡ್-19: ದೇಶದಲ್ಲಿಂದು 12,286 ಹೊಸ ಕೇಸ್ ಪತ್ತೆ, 91 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,286 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,11,24,527ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Published: 02nd March 2021 09:48 AM  |   Last Updated: 02nd March 2021 12:51 PM   |  A+A-


Filep photo

ಸಂಗ್ರಹ ಚಿತ್ರ

Posted By : Manjula VN
Source : ANI

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,286 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,11,24,527ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಒಂದೇ ದಿನ ಮಹಾಮಾರಿ ವೈರಸ್ 91 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,57,248ಕ್ಕೆ ಏರಿಕೆಯಾಗಿದೆ.

ಈ ನಡುವೆ ಒಟ್ಟಾರೆ 1,11,24,527 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 12,464 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,07,98,921ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ದೇಶದಲ್ಲಿ 1,68,358 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

ಇನ್ನು ಭಾರತದಲ್ಲಿ ಒಂದೇ ದಿನ 7,59,283 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 21,76,18,057 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.

ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,48,54,136ಮಂದಿಗೆ ಲಸಿಕೆಯನ್ನು ನೀಡಲಾಗಿದ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Stay up to date on all the latest ರಾಷ್ಟ್ರೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp