ಮುಂಬೈ ಪ್ರಕರಣಗಳನ್ನು ಶಿಮ್ಲಾ ಕೋರ್ಟ್ ಗೆ ವರ್ಗಾಯಿಸುವಂತೆ ಕೋರಿ ಸುಪ್ರೀಂಗೆ ಕಂಗನಾ ಅರ್ಜಿ

ತಮ್ಮ ವಿರುದ್ಧ ಮುಂಬೈ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಿಮಾಚಲ ಪ್ರದೇಶದ ಶಿಮ್ಲಾ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಬಾಲಿವುಡ್ ನಟಿ ಕಂಗನಾ ರನೌತ್

Published: 02nd March 2021 05:50 PM  |   Last Updated: 02nd March 2021 05:50 PM   |  A+A-


kangana-2

ರಂಗೋಲಿ - ಕಂಗನಾ

Posted By : Lingaraj Badiger
Source : UNI

ನವದೆಹಲಿ: ತಮ್ಮ ವಿರುದ್ಧ ಮುಂಬೈ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಿಮಾಚಲ ಪ್ರದೇಶದ ಶಿಮ್ಲಾ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಬಾಲಿವುಡ್ ನಟಿ ಕಂಗನಾ ರನೌತ್ ಹಾಗೂ ಅವರ ಸಹೋದರಿ ರಂಗೋಲಿ ಚಂದೇಲ್ ಅವರು ಮಂಗಳವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ವಕೀಲ ನೀರಜ್ ಶೇಖರ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ, ತಮ್ಮ ವಿರುದ್ಧ ಮಹಾರಾಷ್ಟ್ರದ ಆಡಳಿತಾರೂಢ ಪಕ್ಷ ಶಿವಸೇನೆ ದುರುದ್ದೇಶಪೂರಿತ ಪ್ರಕರಣಗಳನ್ನು ದಾಖಲಿಸಿದೆ. ಆದ್ದರಿಂದ ಮುಂಬೈನಲ್ಲಿ ವಿಚಾರಣೆಗಳು ಮುಂದುವರಿದರೆ ತಮ್ಮ ಜೀವಕ್ಕೆ ಅಪಾಯವಿದೆ ಎಂದು ವಾದಿಸಿದರು.

ನಟಿಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ವೈ-ಪ್ಲಸ್ ಭದ್ರತೆಯನ್ನು ನೀಡಿದೆ. ಅವರು "ಜೀವ ಮತ್ತು ಆಸ್ತಿಗೆ ಗಂಭೀರ ಬೆದರಿಕೆಯನ್ನು ಎದುರಿಸುತ್ತಿದ್ದು, ಪ್ರಕರಣಗಳನ್ನು ಮುಂಬೈನಿಂದ ವರ್ಗಾಯಿಸದಿದ್ದರೆ ಅವರ ಜೀವಕ್ಕೆ ಅಪಾಯವಿದೆ" ಅರ್ಜಿಯಲ್ಲಿ ತಿಳಿಸಲಾಗಿದೆ.

ಬೃಹತ್‌ ಮುಂಬೈ ಮಹಾನಗರ ಪಾಲಿಕೆ ಕಂಗನಾ ಅವರ ಪಾಲಿ ಹಿಲ್ ಬಂಗಲೆಯ ಒಂದು ಭಾಗವನ್ನು ನೆಲಸಮಗೊಳಿಸಿದ ಘಟನೆಯನ್ನೂ ಮನವಿಯಲ್ಲಿ ಉಲ್ಲೇಖಿಸಲಾಗಿದೆ.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp