ಚುನಾವಣೆಗೆ ಮುನ್ನವೇ ಮಮತಾಗೆ ಕೈಕೊಟ್ಟ ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್: ಬಿಜೆಪಿ ಕುಹುಕ

ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರಧಾನ ಸಲಹೆಗಾರರಾಗಿ ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ನೇಮಕಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಚುನಾವಣೆಗೂ ಮುನ್ನವೇ ತೃಣಮೂಲ ಕಾಂಗ್ರೆಸ್(ಟಿಎಂಸಿ) ಅಧ್ಯಕ್ಷ ಮಮತಾ ಬ್ಯಾನರ್ಜಿ ಅವರಿಗೆ ಕೈಗೊಟ್ಟು ಹೋಗಿದ್ದಾರೆ ಎಂದು ಕುಹುಕವಾಡಿದೆ.

Published: 02nd March 2021 07:14 PM  |   Last Updated: 02nd March 2021 07:14 PM   |  A+A-


Mamata-Prashant Kishor

ಮಮತಾ ಬ್ಯಾನರ್ಜಿ-ಪ್ರಶಾಂತ್ ಕಿಶೋರ್

Posted By : Vishwanath S
Source : PTI

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರಧಾನ ಸಲಹೆಗಾರರಾಗಿ ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ನೇಮಕಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಚುನಾವಣೆಗೂ ಮುನ್ನವೇ ತೃಣಮೂಲ ಕಾಂಗ್ರೆಸ್(ಟಿಎಂಸಿ) ಅಧ್ಯಕ್ಷ ಮಮತಾ ಬ್ಯಾನರ್ಜಿ ಅವರಿಗೆ ಕೈಗೊಟ್ಟು ಹೋಗಿದ್ದಾರೆ ಎಂದು ಕುಹುಕವಾಡಿದೆ. 

"ಪ್ರಶಾಂತ್ ಅವರು ದೀದಿ(ಬ್ಯಾನರ್ಜಿ) ಯನ್ನು ಸಹ ತೊರೆದಿದ್ದಾರೆ. ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಮಮತಾರ ಅತಿದೊಡ್ಡ ಸಲಹೆಗಾರ ಬೇರೊಬ್ಬರೊಂದಿಗೆ ಸೇರಿಕೊಂಡಿದ್ದಾರೆ. ಈ ಬೆಳವಣಿಗೆಯೇ ಸಾಕಷ್ಟು ವಿಷಯಗಳನ್ನು ತಿಳಿಸಿಕೊಡುತ್ತದೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ವಕ್ತಾರ ಸಂಪಿತ್ ಪತ್ರ ಹೇಳಿದ್ದಾರೆ. 

ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27ರಿಂದ ಎಂಟು ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಇನ್ನು ಕಿಶೋರ್ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿಗೆ ಮುಖ್ಯಕಾರ್ಯತಂತ್ರ ನಿಪುಣರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಕೆಲವು ವರ್ಷಗಳಿಂದ ದೇಶಾದ್ಯಂತ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಪ್ರಶಾಂತ್ ಕಿಶೋರ್ ಬಿಜೆಪಿಯೇತರ ಪಕ್ಷಗಳೊಂದಿಗೆ ಕೆಲಸ ಮಾಡಿದ್ದರು.

294 ಕ್ಷೇತ್ರಗಳನ್ನು ಹೊಂದಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷವು 200 ಕ್ಷೇತ್ರಗಳ್ಲಲಿ ಗೆಲ್ಲಲಿದೆ ಎಂದು ಬಿಜೆಪಿಯ ಹಿರಿಯ ನಾಯಕರಾದ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಪ್ರತಿಪಾದಿಸುತ್ತಾ ಬಂದಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರಶಾಂತ್ ಕಿಶೋರ್ ಗೆ ಕ್ಯಾಬಿನೆಟ್ ದರ್ಜೆ ಸಚಿವನ ಸ್ಥಾನವನ್ನು ನೀಡಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp