ಬಿಜೆಪಿ ಸೋಲಿಸುವಂತೆ ಚುನಾವಣೆ ನಡೆಯುವ ಐದು ರಾಜ್ಯಗಳ ರೈತರಿಗೆ ಸಂಯುಕ್ತ ಕಿಸಾನ್ ಮೋರ್ಚಾ ಮನವಿ
ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ನೇತೃತ್ವ ವಹಿಸಿಕೊಂಡಿರುವ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ಕೆಎಂ) ತನ್ನ ನಾಯಕರನ್ನು ಚುನಾವಣೆ ನಡೆಯುವ...
Published: 02nd March 2021 07:39 PM | Last Updated: 02nd March 2021 07:39 PM | A+A A-

ರೈತರ ಪ್ರತಿಭಟನೆ
ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ನೇತೃತ್ವ ವಹಿಸಿಕೊಂಡಿರುವ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ಕೆಎಂ) ತನ್ನ ನಾಯಕರನ್ನು ಚುನಾವಣೆ ನಡೆಯುವ ಐದು ರಾಜ್ಯಗಳಿಗೆ ಕಳುಹಿಸಲಿದ್ದು, ಅವರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವಂತೆ ಅಲ್ಲಿನ ರೈತರಿಗೆ ಮನವಿ ಮಾಡಲಿದ್ದಾರೆ ಎಂದು ರೈತ ಸಂಘಟನೆಯ ಮುಖಂಡರು ಮಂಗಳವಾರ ಹೇಳಿದ್ದಾರೆ.
ದೆಹಲಿ ಗಡಿಯಲ್ಲಿ ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ 100 ದಿನ ಪೂರ್ಣಗೊಳಿಸುತ್ತಿರುವುದರಿಂದ ಪ್ರತಿಭಟನಾ ನಿರತ ರೈತರು ಮಾರ್ಚ್ 6 ರಂದು ಕೆಎಂಪಿ (ವೆಸ್ಟರ್ನ್ ಪೆರಿಫೆರಲ್) ಎಕ್ಸ್ಪ್ರೆಸ್ವೇಯನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ.
ಮಾರ್ಚ್ 6 ರಂದು ಬೆಳಗ್ಗೆ 11 ಗಂಟೆಯಿಂದ ಐದು ಗಂಟೆಗಳ ಕಾಲ ಎಕ್ಸ್ಪ್ರೆಸ್ವೇಯನ್ನು ವಿವಿಧ ಕಡೆಗಳಲ್ಲಿ ಬಂದ್ ಮಾಡಲಾಗುವುದು ಎಂದು ಎಸ್ಕೆಎಂ ಮುಖಂಡ ಯೋಗೇಂದ್ರ ಯಾದವ್ ಅವರು ತಿಳಿಸಿದ್ದಾರೆ.
ಚುನಾವಣೆ ನಡೆಯುವ ರಾಜ್ಯಗಳ ರೈತರ ಮನವೊಲಿಸಲು ಎಸ್ಕೆಎಂ ನಾಯಕರು ಮಾರ್ಚ್ 12 ರಂದು ಕೋಲ್ಕತ್ತಾದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ ಎಂದು ಅವರು ಹೇಳಿದರು.
ಎಸ್ಕೆಎಂ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್ ಮಾತನಾಡಿ, ಎಸ್ಕೆಎಂ ತಂಡಗಳು ಪಶ್ಚಿಮ ಬಂಗಾಳ ಮತ್ತು ಕೇರಳ ಸೇರಿದಂತೆ ಐದು ರಾಜ್ಯಗಳಿಗೆ ಭೇಟಿ ನೀಡಿ, ಬಿಜೆಪಿಯನ್ನು ಸೋಲಿಸುವಂತೆ ಅಲ್ಲಿನ ರೈತರಿಗೆ ಮನವಿ ಮಾಡುತ್ತವೆ ಎಂದರು.